ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ: ವೈದ್ಯರ ಹೇಳಿಕೆ
ಕಳೆದ 20 ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೈದ್ಯರು ತಿಳಿಸಿದ್ದಾರೆ.

ಕೋಲ್ಕತಾ: ಕಳೆದ 20 ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, 85 ವರ್ಷದ ಸೌಮಿತ್ರ ಚಟರ್ಜಿ ಅವರು ಥೆಸ್ಪಿಯನ್ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಮತ್ತು ಕಳೆದ 24 ಗಂಟೆಗಳಲ್ಲಿ ಅವರ ಪ್ಲೇಟ್‌ಲೆಟ್ ಎಣಿಕೆ ಮತ್ತಷ್ಟು ಕುಸಿದಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
ಪಿಟಿಐ ಸುದ್ದಿ ಸಂಸ್ಥೆ ಮಾಡಿರುವ ವರದಿಯಂತೆ 'ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದೆ. ಅವರಿಗೆ ಬಹಳ ಕಡಿಮೆ ಪ್ರಜ್ಞೆ ಇದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವರದಿ ಮಾಡಿದೆ. ಇನ್ನು ಅವರು ಕೋಮಾಕ್ಕೆ ಹೋಗಿದ್ದಾರೆಯೇ ಎಂದು ಕೇಳಿದಾಗ ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯರು "ರೋಗಿಯ ಪ್ರಸ್ತುತ ಸ್ಥಿತಿಯನ್ನು ಮೌಲ್ಯಮಾಪನ ಮಾಡುತ್ತಿದ್ದಾರೆ. ಅವರ ರಕ್ತದಲ್ಲಿನ ಯೂರಿಯಾ ಮತ್ತು ಸೋಡಿಯಂ ಮಟ್ಟವು ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಅಕ್ಟೋಬರ್ 6 ರಂದು ಕೊರೋನಾ ಸೋಂಕು ಧೃಢವಾದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


