ಮಹಾಘಟಬಂಧನ್ ಗೆ ಸ್ಪಷ್ಟ ಬಹುಮತ, ಉದ್ಯೋಗಕ್ಕೆ ಮೊದಲ ಆದ್ಯತೆ: ತೇಜಶ್ವಿ ಯಾದವ್
ಬಿಹಾರ ಚುನಾವಣೆಯಲ್ಲಿ 'ಮಹಾಘಟಬಂಧನ್' ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ವಿಶ್ವಾಸದಲ್ಲಿರುವ ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಅವರು, ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.

ಪಾಟ್ನಾ: ಬಿಹಾರ ಚುನಾವಣೆಯಲ್ಲಿ 'ಮಹಾಘಟಬಂಧನ್' ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ವಿಶ್ವಾಸದಲ್ಲಿರುವ ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಅವರು, ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.
ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ಮೊದಲ ಅಧಿವೇಶನದಲ್ಲಿಯೇ ಕೇಂದ್ರ ಸರ್ಕಾರದ "ರೈತ ವಿರೋಧಿ" ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ ಮಂಡಿಸಲಾಗುವುದು ಎಂದು ತೇಜಶ್ವಿ ಯಾದವ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ನಾನು ವಿಷಯಾಧಾರಿತ ಪ್ರಚಾರ ಮಾಡುತ್ತಿದ್ದು, ಮತ ಎಣಿಕೆಯ ದಿನವಾದ ನವೆಂಬರ್ 10 ರಂದು "ಬಿಹಾರ ಹೊಸ ಸರ್ಕಾರದ ಉದಯಕ್ಕೆ ಸಾಕ್ಷಿಯಾಗಲಿದೆ" ಎಂದು ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ತೇಜಶ್ವಿ ಯಾದವ್ ಹೇಳಿದ್ದಾರೆ.
ನಾವು ಅಧಿಕಾರಕ್ಕೆ ಬಂದರೆ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಹಾರದ ಯುವಕರಿಗೆ 10 ಲಕ್ಷ ಉದ್ಯೋಗಗಳನ್ನು ನೀಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಯಾದವ್ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


