ರಾಣಿ ಪದ್ಮಾವತಿ ಸ್ಮಾರಕ ಘೋಷಿಸಿದ ಮಧ್ಯ ಪ್ರದೇಶ ಸಿಎಂ, ಭನ್ಸಾಲಿ ಚಿತ್ರಕ್ಕೆ ಚೌಹಾಣ್ ತರಾಟೆ
ಉಪ ಚುನಾವಣೆ ಹಿನ್ನೆಲೆಯಲ್ಲಿ ರಜಪೂತ ಮತ ಸೆಳೆಯಲು ಮುಂದಾಗಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭೋಪಾಲ್ನಲ್ಲಿ ರಜಪೂತ ರಾಣಿ ಪದ್ಮಾವತಿ ಸ್ಮಾರಕ ನಿರ್ಮಿಸುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ಇಂದೋರ್: ಉಪ ಚುನಾವಣೆ ಹಿನ್ನೆಲೆಯಲ್ಲಿ ರಜಪೂತ ಮತ ಸೆಳೆಯಲು ಮುಂದಾಗಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭೋಪಾಲ್ನಲ್ಲಿ ರಜಪೂತ ರಾಣಿ ಪದ್ಮಾವತಿ ಸ್ಮಾರಕ ನಿರ್ಮಿಸುವುದಾಗಿ ಮಂಗಳವಾರ ಘೋಷಿಸಿದ್ದಾರೆ.
ಸಾಂಪ್ರದಾಯಿಕ ಶಸ್ತ್ರ ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚೌಹಾಣ್, ರಾಜ್ಯ ಸರ್ಕಾರ ರಾಣಿ ಪದ್ಮಾವತಿ ಸ್ಮಾರಕ ನಿರ್ಮಿಸಲಿದೆ. ಭೋಪಾಲ್ನ ಮನುಭಾನ್ ಕಿ ತೆಕ್ರಿಯಲ್ಲಿ ಸ್ಮಾರಕಕ್ಕಾಗಿ ಭೂಮಿಯನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು. ಅಲ್ಲದೆ "ಪದ್ಮಾವತ್" ಚಿತ್ರದ ವಿರುದ್ಧ ಪ್ರತಿಭಟಿಸಿದವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಸಿಎಂ ಹೇಳಿದರು.
ಇದೇ ವೇಳೆ ವಿವಾದಾತ್ಮಕ ಚಿತ್ರ ನಿರ್ಮಿಸಿದ ಸಂಜಯ್ ಲೀಲಾ ಭನ್ಸಾಲಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಚೌಹಾಣ್, "ಪದ್ಮಾವತ್" ಚಿತ್ರದಿಂದ "ಸಮಾಜದ ಗೌರವಕ್ಕೆ ಧಕ್ಕೆಯಾಗಿದೆ" ಎಂದರು.
ರಾಜ್ಯದಲ್ಲಿ ಪದ್ಮಾವತ್ ಚಿತ್ರ ವಿರೋಧಿಸಿ ಪ್ರತಿಭಟನೆ ನಡೆಸಿದವರ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಈಗ ಆ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ನಾವು ನಿರ್ಧರಿಸಿದ್ದೇವೆ ಎಂದು ಸಿಎಂ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


