ಹರಿಯಾಣ: ಕಾಲೇಜ್ ಮುಂದೆಯೇ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ, ಇಬ್ಬರ ಬಂಧನ
ಕಾಲೇಜ್ ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದ 21 ವರ್ಷದ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಹರಿಯಾಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಚಂಡೀಗಢ: ಕಾಲೇಜ್ ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದ 21 ವರ್ಷದ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಹರಿಯಾಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಫರಿದಾಬಾದ್ನ ಬಲ್ಲಬ್ಗರ್ನ ಕಾಲೇಜಿನ ಮುಂದೆ ಈ ಘಟನೆ ನಡೆದಿದ್ದು, ಪರೀಕ್ಷೆ ಬರೆದು ಹೊರ ಬಂದಿದ್ದ ಬಿ.ಕಾಂ ವಿದ್ಯಾರ್ಥಿಯನ್ನು ಕಾರಿನಲ್ಲಿ ಅಪಹರಿಸಲು ಮುಂದಾದಾಗ, ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಪಾಯಿಂಟ್ ಬ್ಲಾಕ್ ರೇಂಜ್ನ ಗನ್ ನಿಂದ ಗುಂಡು ಹಾರಿಸಿ ಭೀಕರ ಹತ್ಯೆ ಮಾಡಲಾಗಿದೆ. ಈ ಘಟನೆಯ ದೃಶ್ಯಗಳು ಇಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿತ್ತು. ಘಟನೆ ಖಂಡಿಸಿ ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.
ಪ್ರಕರಣದ ಶೀಘ್ರ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಅವರು ಹೇಳಿದ್ದಾರೆ.
ಇನ್ನು ಮುಖ್ಯ ಆರೋಪಿ ತೌಸಿಫ್ ಮತ್ತು ಆತನ ಸಹಚರ ರೆಹಾನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರನ್ನು ಫರಿದಾಬಾದ್ ಜಿಲ್ಲೆಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಎರಡು ದಿನಗಳ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಹತ್ಯೆಯಾದ ಯುವತಿಯನ್ನು ನಿಖಿತಾ ಎಂದು ಗುರುತಿಸಲಾಗಿದೆ. ಅಂತಿಮ ವರ್ಷದ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ್ದಳು. ಈ ಘಟನೆ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗ ಘಟನೆ ಕುರಿತು ಕ್ರಮ ತೆಗೆದುಕೊಳ್ಳುವಂತೆ ಹರಿಯಾಣ ಪೊಲೀಸರಿಗೆ ಪತ್ರ ಬರೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


