‘ಗೋ ಕೊರೋನಾ ಗೋ’ ಎಂದಿದ್ದ ಕೇಂದ್ರ ಸಚಿವ ರಾಮದಾಸ್ ಅಠಾವಳೆಗೆ ಕೋವಿಡ್-19 ಪಾಸಿಟಿವ್
ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರಿಗೆ ಮಂಗಳವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂಬೈ: ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರಿಗೆ ಮಂಗಳವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ನಾನು ಕೆಲವು ದಿನಗಳವರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಿ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಸುರಕ್ಷಿತವಾಗಿರಿ ಎಂದು ರಾಮದಾಸ್ ಅಠಾವಳೆ ಅವರು ಟ್ವೀಟ್ ಮಾಡಿದ್ದಾರೆ.
ನಿನ್ನೆಯಷ್ಟೇ ಬಾಲಿವುಡ್ ನಟಿ ಪಾಯಲ್ ಘೋಷ್ ಅವರು ಕೇಂದ್ರ ಸಚಿವ ರಾಮದಾಸ್ ಅಠಾವಳೆ ನೇತೃತ್ವದ ರಿಪಬ್ಲಿಕನ್ ಪಾರ್ಟಿ ಆಪ್ ಇಂಡಿಯಾಗೆ ಸೇರ್ಪಡೆಯಾಗಿದ್ದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಯಲ್ ಘೋಷ್ ಮತ್ತು ಅಠಾವಳೆ ಜೊತೆಯಾಗಿಯೇ ನಿಂತಿದ್ದರು ಮತ್ತು ಕೇಂದ್ರ ಸಚಿವರು ಮಾಸ್ಕ್ ಅನ್ನು ಪೂರ್ಣ ಪ್ರಮಾಣದಲ್ಲಿ ಧರಿಸದಿರುವುದು ಈಗ ನಟಿ ಸೇರಿದಂತೆ ಪತ್ರಿಕಾಗೋಷ್ಠಿಯಲ್ಲಿದ್ದ ಎಲ್ಲರಿಗೂ ಆತಂಕ ಶುರುವಾಗಿದೆ.
ಅಠಾವಳೆ ಅವರು ಕಳೆದ ಫೆಬ್ರವರಿಯಲ್ಲಿ, ಮುಂಬೈನ ಚೀನಾ ರಾಯಭಾರಿ ಟ್ಯಾಂಗ್ ಗುಯೊಕೈ ಮತ್ತು ಬೌದ್ಧ ಭಿಕ್ಷುಗಳೊಂದಿಗೆ ‘ಗೋ ಕರೋನಾ ಗೋ’ ಎಂದು ಜಪಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


