ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ ವೈರಸ್ ಪಾಸಿಟಿವ್
ಕೋವಿಡ್ -19 ಪರೀಕ್ಷೆಯಲ್ಲಿ ತಮಗೆ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ತಿಳಿಸಿದ್ದಾರೆ.

ನವದೆಹಲಿ: ಕೋವಿಡ್ -19 ಪರೀಕ್ಷೆಯಲ್ಲಿ ತಮಗೆ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ತಿಳಿಸಿದ್ದಾರೆ.
‘ಪ್ರಕಟಣೆ ನೀಡುವಾಗ ಪದಗಳನ್ನು ಹುಡುಕುವುದು ನನಗೆ ಅಪರೂಪವಾಗಿರುವುದರಿಂದ ಸರಳವಾಗಿ ಹೇಳುತ್ತಿದ್ದೇನೆ. ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ತಕ್ಷಣವೇ ಪರೀಕ್ಷೆಗೆ ಒಳಪಡಲು ವಿನಂತಿಸುತ್ತಿದ್ದೇನೆ.’ ಎಂದು ಸಚಿವೆ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಸಾಂಕ್ರಾಮಿಕ ವೈರಸ್ ತಗುಲಿದ ಅತಿಗಣ್ಯವ್ಯಕ್ತಿಗಳಲ್ಲಿ ಸ್ಮೃತಿ ಇರಾನಿ ಒಬ್ಬರಾಗಿದ್ದಾರೆ. ಈ ಹಿಂದೆ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಅನೇಕ ಸಚಿವರಿಗೆ ಮಾರಣಾಂತಿಕ ವೈರಸ್ ಸೋಂಕು ದೃಢಪಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


