ಬಿಹಾರ ಚುನಾವಣೆ: ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಆರಂಭ, 1,066 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇದರಂತೆ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಪಾಟ್ನಾ: ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇದರಂತೆ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.
ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಮತದಾನ ಪ್ರಕ್ರಿಯೆ ನಡೆಸುವ ಸಲುವಾಗಿ ಚುನಾವಣಾ ಆಯೋಗವು ಈಗಾಗಲೇ ಮಾರ್ಗಸೂಚಿ ಹೊರಡಿಸಿದ್ದು, ಒಂದು ಮತಗಟ್ಟೆಯಲ್ಲಿ 1600ರಿಂದ 1000 ಮತದಾರರಿಗೆ ಮಾತ್ರ ಹಕ್ಕು ಚಲಾಯಿಸಲು ಅನುಮತಿ ನೀಡಿದೆ. 80 ವರ್ಷಕ್ಕಿಂತಲ ಮೇಲ್ಪಟ್ಟವರಿಗೆ ಪೋಸ್ಟರ್ ಕಾರ್ಡ್ ಮೂಲಕ ಮತದಾನ ಮಾಡುವುದಕ್ಕೆ ಅನುಮತಿ ನೀಡಲಾಗಿದೆ.
ಅಲ್ಲದೆ, ವೋಟಿಂಗ್ ಯಂತ್ರವನ್ನು ಸ್ಯಾನಿಟೈಸ್ ಮಾಡುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ರೀನಿಂಗ್ ಮತ್ತು ಸೋಪು, ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಿದೆ. ಪ್ರಮುಖವಾಗಿ ಮತದಾನ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕಡ್ಡಾಯವಾಗಿ ಸೂಚಿಸಿದೆ.
ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಹಕ್ಕು ಚಲಾಯಿಸಿಲಿದ್ದಾರೆ. ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗಿಗಳಿದ್ದಾರೆಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಮಂದಿ ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗಯಾ ಕ್ಷೇತ್ರದಲ್ಲಿ ಅತೀ ಹೆಚ್ಚು ಎಂದರೆ, 27 ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ ಕಾಟೋರಿಯಾ ಕ್ಷೇತ್ರದಲ್ಲಿ ಅತಿ ಕಡಿಮೆ ಎಂದರೆ ಐವರು ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


