ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 43,893 ಕೇಸ್ ಪತ್ತೆ, 508 ಮಂದಿ ಸಾವು
ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಮತ್ತೆ 50 ಸಾವಿರಕ್ಕಿಂತ ಕಡಿಮೆ ದಾಖಲಾಗಿವೆ. ಬುಧವಾರ 43,893 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 79.90 ಲಕ್ಷಕ್ಕೆ ಏರಿಕೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಮತ್ತೆ 50 ಸಾವಿರಕ್ಕಿಂತ ಕಡಿಮೆ ದಾಖಲಾಗಿವೆ. ಬುಧವಾರ 43,893 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 79.90 ಲಕ್ಷಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್'ಗೆ 508 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,20,010ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈ ನಡುವೆ ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ 79,90,322 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 58,439 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 72,59,509ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 6,10,803 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ವೇಳೆ ದೇಶದಲ್ಲಿ ಕೊರೋನಾ ಸೋಂಕು ಇಳಿಕೆ ಆಗುತ್ತಿರುವಾಗಲೇ, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ ಮತ್ತು ದೆಹಲಿಯಲ್ಲಿ ಹಬ್ಬದ ವೇಳೆ ಕೊರೋನಾ ಪ್ರಕರಣಗಳು ಏರಿಕೆಯಾಗಿರುವುದು ಕಂಡು ಬಂದಿದೆ. ದೇಶದ ಒಟ್ಟು ಪ್ರಕರಣಗಳ ಶೇ.49.04ರಷ್ಟು ಈ ರಾಜ್ಯಗಳಲ್ಲಿ ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,66,786 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 10,54,87,680 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


