ಜೆಇಇ ಪರೀಕ್ಷೆಯಲ್ಲಿ 99.8% ಗಳಿಸಿದ್ದ ಅಭ್ಯರ್ಥಿ ನಕಲಿ: ವೈದ್ಯರಾಗಿರುವ ತಂದೆಯೂ ಶಾಮೀಲು, ಬಂಧನ!
ಜೆಇಇ ಪರೀಕ್ಷೆಯಲ್ಲಿ ಶೇ.99.8 ರಷ್ಟು ಗಳಿಸಿದ್ದ ಅಭ್ಯರ್ಥಿ ತನ್ನ ಪರವಾಗಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದು ಈಗ ಬಹಿರಂಗವಾಗಿದೆ.

ಗುವಾಹಟಿ: ಜೆಇಇ ಪರೀಕ್ಷೆಯಲ್ಲಿ ಶೇ.99.8 ರಷ್ಟು ಗಳಿಸಿದ್ದ ಅಭ್ಯರ್ಥಿ ತನ್ನ ಪರವಾಗಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದು ಈಗ ಬಹಿರಂಗವಾಗಿದೆ.
ಅಸ್ಸಾಂ ನಲ್ಲಿ ಈ ಘಟನೆ ವರದಿಯಾಗಿದ್ದು ತನ್ನ ಪರವಾಗಿ ಪರೀಕ್ಷೆ ಬರೆಯುವುದಕ್ಕಾಗಿ ತನ್ನ ಸೋಗಿನಲ್ಲಿ ಬೇರೊಬ್ಬನನ್ನು ಕಳಿಸಿ ಶೇ.99.8 ರಷ್ಟು ಅಂಕ ಗಳಿಸಿದ್ದ, ಈತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಅಪರಾಧವೆಸಗಿರುವ ಅಭ್ಯರ್ಥಿಯ ತಂದೆ ವೈದ್ಯರಾಗಿದ್ದು ಅವರೂ ಸೇರಿದಂತೆ ಈ ಘಟನೆಯಲ್ಲಿ ಶಾಮೀಲಾಗಿದ್ದ ಇತರ 3 ಮಂದಿಯನ್ನು ಬಂಧಿಸಲಾಗಿದೆ.
ಸೆ.05 ರಂದು ಗುವಾಹಟಿ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಈ ಅಭ್ಯರ್ಥಿ ಹಾಜರಾಗಿರಲಿಲ್ಲ, ಆತನ ಪರವಾಗಿ ಬೇರೊಬ್ಬರು ಪರೀಕ್ಷೆಗೆ ಹಾಜರಾಗಿದ್ದರು ಎಂಬ ಬಗ್ಗೆ ಮಿತ್ರದೇವ್ ಶರ್ಮಾ ಎಂಬುವವರಿಂದ ಅ.23 ರಂದು ದೂರು ದಾಖಲಾಗಿತ್ತು. ಈ ದೂರಿನ ಅನ್ವಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ
ಜೆಇಇ ಮೇನ್ಸ್ ನಲ್ಲಿ ಈ ಅಭ್ಯರ್ಥಿ ಶೇ.99.8 ರಷ್ಟು ಅಂಕ ಗಳಿಸಿದ್ದಾನೆ ಎಂದೂ ದೂರಿನಲ್ಲಿ ತಿಳಿಸಲಾಗಿತ್ತು. ಈ ಕುರಿತು ತನಿಖೆ ನಡೆಸಲು ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿ ಒಟ್ಟು 5 ಮಂದಿಯನ್ನು ಬಂಧಿಸಿದ್ದಾರೆ.
ಅಭ್ಯರ್ಥಿ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿರುವಾಗ ತಪ್ಪನ್ನು ಒಪ್ಪಿಕೊಂಡಿರುವುದು ರೆಕಾರ್ಡ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಂಚನೆಯಲ್ಲಿ ಗುವಾಹಟಿಯ ಖಾಸಗಿ ಕೋಚಿಂಗ್ ಇನ್ಸ್ಟಿಟ್ಯೂಟ್ ಕೂಡ ಶಾಮೀಲಾಗಿದೆ ಎಂದು ಶಂಕಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


