ದೆಹಲಿ ಮಾಲಿನ್ಯ: ಕಾರು ಬಿಟ್ಟು, ಸೈಕಲ್ ತುಳಿಯುವ ಸಮಯ ಇದು ಎಂದ ಸುಪ್ರೀಂ ಕೋರ್ಟ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ "ಸುಂದರವಾದ ಕಾರುಗಳನ್ನು" ಬಳಸುವುದನ್ನು ನಿಲ್ಲಿಸಿ ಎಲ್ಲರೂ ಸೈಕಲ್ ತುಳಿಯುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ "ಸುಂದರವಾದ ಕಾರುಗಳನ್ನು" ಬಳಸುವುದನ್ನು ನಿಲ್ಲಿಸಿ ಎಲ್ಲರೂ ಸೈಕಲ್ ತುಳಿಯುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುವಿಕೆಯಿಂದಾಗಿ ದೆಹಲಿ-ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ(ಎನ್‌ಸಿಆರ್) ಉಂಟಾಗುವ ಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಕೆಲವು ತಜ್ಞರ ಪ್ರಕಾರ ಕೃಷಿ ತ್ಯಾಜ್ಯ ಸುಡುವುದು ಮಾಲಿನ್ಯದ ಮೂಲವಲ್ಲ ಎಂದು ಹೇಳಿದರು.
"ನೀವು ನಿಮ್ಮ ಸುಂದರವಾದ ಕಾರುಗಳ ಬಳಕೆಯನ್ನು ನಿಲ್ಲಿಸಬೇಕೆಂದು ನಾವು ಬಯಸುತ್ತೇವೆ. ಆದರೆ ನೀವು ಇದನ್ನು ಇಷ್ಟಪಡುವುದಿಲ್ಲ. ನಾವೆಲ್ಲರೂ ಕಾರು, ಬೈಕ್ ಬಳಸುವುದನ್ನು ಬಿಟ್ಟು ಸೈಕಲ್‌ಗಳನ್ನು ಬಳಸಬೇಕು" ಎಂದು ಸಿಜೆಐ ಹೇಳಿದ್ದಾರೆ.
"ಕೆಲವು ತಜ್ಞರು ಅನೌಪಚಾರಿಕವಾಗಿ ನಮಗೆ ತಿಳಿಸಿದ್ದು, ದೆಹಲಿ ಮಾಲಿನ್ಯಕ್ಕೆ ಕೃಷಿ ತ್ಯಾಜ್ಯ ಸುಡುವುದು ಮಾತ್ರವಲ್ಲ, ಬೇರೆ ಕಾರಣಗಳಿಂದಲೂ ಮಾಲಿನ್ಯವಾಗುತ್ತಿದೆ" ಎಂದು ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೂ ಒಳಗೊಂಡ ನ್ಯಾಯಪೀಠ ಹೇಳಿದೆ.
ಈ ವೇಳೆ ಮಾಲಿನ್ಯವನ್ನು ನಿಗ್ರಹಿಸುವ ಕುರಿತು ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯನ್ನು ಹೊರಡಿಸಿದ್ದು, ಅದನ್ನು ಈಗಾಗಲೇ ಪ್ರಕಟಿಸಲಾಗಿದೆ ಎಂದು ಸೊಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


