ದೇಶ

ದೇಶದಲ್ಲಿ ಇಳಿಯುತ್ತಿರುವ ಕೊರೋನಾ ಆರ್ಭಟ: ಭಾರತದಲ್ಲಿ 49,881 ಹೊಸ ಕೇಸ್ ಪತ್ತೆ, 517 ಮಂದಿ ಸಾವು

ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಸತತ 4ನೇ ದಿನವೂ 50 ಸಾವಿರಕ್ಕಿಂತಲೂ ಕಡಿಮೆ ದಾಖಲಾಗಿವೆ. ಭಾರತದಲ್ಲಿಂದು 49,881 ಕೊರೋನಾ ವೈಸರ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 80,40,203ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇಳಿಯುತ್ತಿರುವ ಕೊರೋನಾ ಆರ್ಭಟ: ಭಾರತದಲ್ಲಿ 49,881 ಹೊಸ ಕೇಸ್ ಪತ್ತೆ, 517 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಸತತ 4ನೇ ದಿನವೂ 50 ಸಾವಿರಕ್ಕಿಂತಲೂ ಕಡಿಮೆ ದಾಖಲಾಗಿವೆ. ಭಾರತದಲ್ಲಿಂದು 49,881 ಕೊರೋನಾ ವೈಸರ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 80,40,203ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 517 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,20,527ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇದೇ ವೇಳೆ ನಿನ್ನೆ ಒಂದೇ ದಿನ 56,480 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿ ಒಟ್ಟು ಗುಣಮುಖರ ಸಂಖ್ಯೆ 73,15,989ಕ್ಕೆ ಏರಿಕೆಯಾಗಿದೆ. ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವುದರೊಂದಿಗೆ ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,03,687ಕ್ಕೆ ಇಳಿಕೆಯಾಗಿದೆ. 

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,75,760 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 10,65,63,440 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.