ಮದುವೆ ದಿಬ್ಬಣದ ವ್ಯಾನ್ ಉರುಳಿ 7 ಜನರ ದುರ್ಮರಣ
ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್ ಉರುಳಿ 7 ಜನ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್ ಉರುಳಿ 7 ಜನ ಮೃತಪಟ್ಟಿದ್ದಾರೆ.ಮೃತಪಟ್ಟಿಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವ

ಅಮರಾವತಿ: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್ ಉರುಳಿ 7 ಜನ ಮೃತಪಟ್ಟಿದ್ದಾರೆ.
ಜಿಲ್ಲೆಯ ಗೋಕವರಂ ಮಂಡಲದ ತಂಟಿಕೊಂಡ ಘಾಟ್ ರಸ್ತೆಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಸಾಗುವಾಗ ಬ್ರೇಕ್ ವೈಫಲ್ಯದಿಂದಾಗಿ ತಂಟಿಕೊಂಡ ಬಳಿ ಬೆಟ್ಟದಿಂದ ವ್ಯಾನ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗೋಕವರಂ ವಲಯದ ತಕುರ್ಪಲೆಂ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆಯ ಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.
ಅಪಘಾತದ ಬಗ್ಗೆ ರಾಜ್ಯಪಾಲ ವಿಶ್ವಭೂಷಣ್ ಹರಿಚಂದ್ರನ್ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


