ಲಸಿಕೆ ಭರವಸೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದು: ಆಯೋಗ ಕೊಟ್ಟ ಕಾರಣ ಹೀಗಿದೆ...
ಬಿಹಾರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಲಸಿಕೆ ಭರವಸೆ ನೀಡಿರುವುದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಲಸಿಕೆ ಭರವಸೆ ನೀಡಿರುವುದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಆರ್ ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅವರ ಊರಿಗೆ ಪ್ರತಿಕ್ರಿಯೆ ನೀಡಿರುವ ಚುನಾವಣಾ ಆಯೋಗ, ಲಸಿಕೆ ಭರವಸೆಯ ವಿಷಯದಲ್ಲಿ ಈ ರೀತಿ ಹೇಳಿದೆ.
ಈ ಭರವಸೆ ತಾರತಮ್ಯದಿಂದ ಕೂಡಿದೆ ಹಾಗೂ ಕೇಂದ್ರ ಸರ್ಕಾರದ ಅಧಿಕಾರದ ದುರ್ಬಳಕೆ ಎಂದು ಗೋಖಲೆಯವರು ಹೇಳಿದ್ದರು.
ಈ ಸಂಬಂಧ ಕೆಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿರುವ ಚುನಾವಣಾ ಆಯೋಗ, ಸಂವಿಧಾನದ ಮೂಲಕ ಸ್ಥಾಪಿತವಾಗಿರುವ ರಾಜ್ಯ ನೀತಿಯಲ್ಲಿನ ನಿರ್ದೇಶನ ತತ್ವಗಳು, ಸರ್ಕಾರ ಅಥವಾ ಆಡಳಿತಕ್ಕೆ ಪ್ರಜೆಗಳಿಗಾಗಿ ಹಲವು ವಿಧಗಳ ಜನಕಲ್ಯಾಣ ಕ್ರಮಗಳನ್ನು ಜಾರಿಗೊಳಿಸುವುದಕ್ಕೆ ಆದೇಶಿಸುತ್ತದೆ. ಆದ್ದರಿಂದ ಈ ರೀತಿಯ ಜನಕಲ್ಯಾಣ ಯೋಜನೆಯನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಈ ರೀತಿಯ ಭರವಸೆ ನೀಡುವುದು ನೀತಿ ಸಂಹಿತೆಯ ಉಲ್ಲಂಘನೆಯಾಗುವುದಿಲ್ಲ ಎಂದು ಆಯೋಗ ತಿಳಿಸಿದೆ.
ಜಾರಿಗೆ ತರಲು ಸಾಧ್ಯವಿರುವ ಯೋಜನೆಗಳ ಮೂಲಕವಷ್ಟೇ ಮತದಾರರ ವಿಶ್ವಾಸವನ್ನು ಬೇಡುವುದಕ್ಕೆ ಸಾಧ್ಯವಿದೆ ಎಂದು ಮತ್ತೊಂದು ಉಲ್ಲೇಖದಲ್ಲಿ ಆಯೋಗ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


