ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ: ಪ್ರಧಾನಿ ಮೋದಿ ಸ್ಮರಣೆ
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.
‘ನಮ್ಮ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನಗಳು.’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಕಳೆದ ಭಾನುವಾರ ಆಕಾಶವಾಣಿಯ ಮಾಸಿಕ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ನರೇಂದ್ರಮೋದಿ, ಇಂದಿರಾಗಾಂಧಿಯವರಿಗೆ ಗೌರವ ಸಲ್ಲಿಸಿದ್ದರು. ‘ಅಕ್ಟೋಬರ್ 31 ರಂದು ನಾವು ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಕಳೆದುಕೊಂಡಿದ್ದೇವೆ. ಅವರಿಗೆ ಗೌರವಯುತ ನಮನಗಳನ್ನು ಸಲ್ಲಿಸುತ್ತೇನೆ.’ಎಂದು ಮೋದಿ ಹೇಳಿದ್ದರು.
ಪ್ರಿಯಾಂಕಾ, ರಾಹುಲ್ ಗಾಂಧಿ ಶ್ರದ್ಧಾಂಜಲಿ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36 ನೇ ಪುಣ್ಯತಿಥಿಯಂದು ಗೌರವ ಸಲ್ಲಿಸಿದ್ದಾರೆ.
'ಅಸತೋ ಮಾ ಸದ್ಗಮಯ ,: ತಮಸೋ ಮಾ ಜ್ಯೋತಿರ್ಗಮಯ ,: ಮೃತ್ಯೋರ್ಮಾ ಅಮೃತಂಗಮಯಾ’ ಎಂದು ಹೇಳಿದ್ದಾರೆ.
ಸುಳ್ಳಿನಿಂದ ಸತ್ಯಕ್ಕೆ. ಕತ್ತಲೆಯಿಂದ ಬೆಳಕಿಗೆ. ಸಾವಿನಿಂದ ಜೀವನಕ್ಕೆ... ಈ ಪದಗಳನ್ನು ಜೀವಿಸುವುದರ ಅರ್ಥವನ್ನು ನನಗೆ ತೋರಿಸಿದ್ದಕ್ಕಾಗಿ ಧನ್ಯವಾದಗಳು ದಾದಿ. '' ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


