ಕೇಂದ್ರದ ಹೊಸ ಕೃಷಿ ಕಾಯ್ದೆ ತಡೆಗೆ ಮಸೂದೆ ಮಂಡಿಸಿದ ರಾಜಸ್ಥಾನ ಸರ್ಕಾರ
ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾಯಿದೆಯನ್ನು ತಡೆಯಲು ರಾಜಸ್ಥಾನ ಸರ್ಕಾರ ಶನಿವಾರ ಮೂರು ಮಸೂದೆಗಳನ್ನು ಮಂಡಿಸಿದೆ.

ಜೈಪುರ: ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾಯಿದೆಯನ್ನು ತಡೆಯಲು ರಾಜಸ್ಥಾನ ಸರ್ಕಾರ ಶನಿವಾರ ಮೂರು ಮಸೂದೆಗಳನ್ನು ಮಂಡಿಸಿದೆ.
ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ಧಾರಿವಾಲ್ ಅವರು, ಅಗತ್ಯ ಸರಕುಗಳ(ವಿಶೇಷ ನಿಬಂಧನೆಗಳು ಮತ್ತು ರಾಜಸ್ಥಾನ ತಿದ್ದುಪಡಿ) ಮಸೂದೆ 2020, ರೈತರ(ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ (ರಾಜಸ್ಥಾನ ತಿದ್ದುಪಡಿ) ಮಸೂದೆ 2020 ಮತ್ತು ರೈತರ ಉತ್ಪಾದನೆ ವ್ಯಾಪಾರ ಹಾಗೂ ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ 2020 ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು.
ವಿಧಾನಸಭೆ ಅಧಿವೇಶನದ ಮೊದಲ ದಿನದಂದು ಧಾರಿವಾಲ್ ಅವರು ನೀತಿ ಸಂಹಿತೆ(ರಾಜಸ್ಥಾನ ತಿದ್ದುಪಡಿ) ಮಸೂದೆ 2020 ಅನ್ನು ಸಹ ಮಂಡಿಸಿದರು.
ಇದೇ ವೇಳೆ ಮಾಜಿ ಅಧ್ಯಕ್ಷ ಪ್ರಣಬ್ ಮುಖರ್ಜಿ ಮತ್ತು ಇತ್ತೀಚೆಗೆ ನಿಧನರಾದ ಇತರ ನಾಯಕರ ಸಂತಾಪ ಸೂಚಿಸಿದ ನಂತರ ವಿಧಾನಸಭೆ ಕಲಾಪವನ್ನು ಸ್ಪೀಕರ್ ಮುಂದೂಡಿದರು.
ಇತ್ತೀಚೆಗಷ್ಟೇ ಇದೇ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಸಹ ಕೇಂದ್ರದ ಕೃಷಿ ಕಾಯ್ದೆ ತಡೆಗೆ ಅಧಿವೇಶನದಲ್ಲಿ ನಾಲ್ಕು ಮಸೂದೆಗಳನ್ನು ಮತ್ತು ನಿರ್ಣಯಗಳನ್ನು ಅಂಗೀಕರಿಸಿತ್ತು. ಈ ಬೆಳವಣಿಗೆಯ ನಡುವೆಯೇ ರಾಜಸ್ಥಾನ ಸರ್ಕಾರ ಕೂಡ ಕೃಷಿ ಕಾಯ್ದೆ ವಿರುದ್ಧ ಮಸೂದೆ ಮಂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


