ಕೇಂದ್ರ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ
ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಕೇಂದ್ರ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ

ನವದೆಹಲಿ: ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಕೇಂದ್ರ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಆಗಸ್ಟ್ 31 ರಂದು ಚುನಾವಣಾ ಆಯುಕ್ತ ಅಶೋಕ್ ಲವಾಸಾ ಸೇವೆ ಅಂತ್ಯವಾದ ಹಿನ್ನೆಲೆಯಲ್ಲಿ ರಾಜೀವ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ಸಂವಿಧಾನದ 324ನೇ ವಿಧಿಯ ಉಪವಿಧಿ (2) ರ ಅನ್ವಯ ಆಗಸ್ಟ್ 31ಕ್ಕೆ ಕೊನೆಗೊಳ್ಳುವ ಲವಾಸಾ ಅವರ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ.
ರಾಜೀವ್ ಕುಮಾರ್ 1984ರ ಬ್ಯಾಚಿನ ಜಾರ್ಖಂಡ್ ಕೇಡರ್ ನ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದಾರೆ. ಇವರು ಸಾರ್ವಜನಿಕ ನೀತಿ ಮತ್ತು ಆಡಳಿತ ಕ್ಷೇತ್ರಗಳಲ್ಲಿ 30 ವರ್ಷಗಳಿಗಿಂತ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ.
ರಾಜೀವ್ ಕುಮಾರ್ ಅವರನ್ನು ಕಳೆದ ವರ್ಷ ಜುಲೈನಲ್ಲಿ ಹಣಕಾಸು ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಈ ವರ್ಷದ ಫೆಬ್ರವರಿಯಲ್ಲಿ ಅವರ ಸೇವಾವಧಿ ಕೊನೆಗೊಡಂಡಿತ್ತು. ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಪ್ರಧಾನ್ ಮಂತ್ರಿ ಧನ್ ಯೋಜನೆ ಮತ್ತು ಮುದ್ರಾ ಸಾಲ ಯೋಜನೆಯಲ್ಲೂ ಇವರು ಕಾರ್ಯನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


