ದೇಶ

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 69,921 ಜನರಿಗೆ ಸೋಂಕು, 819 ಮಂದಿ ಬಲಿ, 65 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಕಳೆದ ಕೆಲವು ದಿನಗಳಿಂದ ದಾಖಲೆಯ ಪ್ರಮಾಣದಲ್ಲಿ ಏರಿಕೆ ದಾಖಲಿಸಿದ್ದ ಕೊರೋನಾ ವೈರಸ್ ಪ್ರಕರಣಗಳು ಕೊಂಚ ಇಳಿಕೆ ಕಂಡಿದೆ. ಮಂಗಳವಾರ 69,921 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 36,91,167ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 69,921 ಜನರಿಗೆ ಸೋಂಕು, 819 ಮಂದಿ ಬಲಿ, 65 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ
ಸಂಗ್ರಹ ಚಿತ್ರ
Published On :

ನವದೆಹಲಿ: ಕಳೆದ ಕೆಲವು ದಿನಗಳಿಂದ ದಾಖಲೆಯ ಪ್ರಮಾಣದಲ್ಲಿ ಏರಿಕೆ ದಾಖಲಿಸಿದ್ದ ಕೊರೋನಾ ವೈರಸ್ ಪ್ರಕರಣಗಳು ಕೊಂಚ ಇಳಿಕೆ ಕಂಡಿದೆ. ಮಂಗಳವಾರ 69,921 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 36,91,167ಕ್ಕೆ ಏರಿಕೆಯಾಗಿದೆ. 

ಒಂದೇ ದಿನ ದೇಶದಲ್ಲಿ 819 ಮಂದಿ ಬಲಿಯಾಗಿದ್ದು, ಸಾವಿಗೀಡಾದವರ ಸಂಖ್ಯೆ 65,288ಕ್ಕೆ ಏರಿಕೆಯಾಗಿದೆ. ಭಾನುವಾರವಷ್ಟೇ ದಾಖಲೆಯ 80 ಸಾವಿರ ಕೇಸ್ ಪತ್ತೆಯಾಗಿತ್ತು. 

ಮತ್ತೊಂದೆಡೆ ಒಂದೇ ದಿನ 64,442 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, 36,91,167 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಒಟ್ಟಾರೆ 28,39,883 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 7,85,996 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇನ್ನು ಅಥೀ ಹೆಚ್ಚು ಕೊರೋನಾ ಕೇಸ್ ಗಳು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಹೊಸದಾಗಿ 16,000 ಕೇಸ್, ದೆಹಲಿಯಲ್ಲಿ 1,358 ಕೇಸ್, ತಮಿಳುನಾಡಿನಲ್ಲಿ 5,956 ಹೊಸ ಕೇಸ್ ಗಳು ಪತ್ತೆಯಾಗಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.