ದೇಶ

ಕಾಶ್ಮಿರ: ಶೂಟ್ ಮಾಡಿಕೊಂಡು ಸಿಆರ್ ಪಿಎಫ್ ಎಎಸ್ ಐ ಆತ್ಮಹತ್ಯೆಗೆ ಶರಣು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕೇಂದ್ರ ರಿಸರ್ವ್ ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‌ಐ)ರೊಬ್ಬರು ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮಿರ: ಶೂಟ್ ಮಾಡಿಕೊಂಡು ಸಿಆರ್ ಪಿಎಫ್ ಎಎಸ್ ಐ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :

ಭದೆರ್ವಾಹ್: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕೇಂದ್ರ ರಿಸರ್ವ್ ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‌ಐ)ರೊಬ್ಬರು ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

33 ನೇ ಬೆಟಾಲಿಯನ್‌ನ ಎಎಸ್ ಐ ಅಮೃತ್ ಭರದ್ವಾಜ್ (52) ಅವರು ರಾತ್ರಿ ಪಾಳಿ ಕರ್ತವ್ಯದ ನಂತರ ಕೋಟ್ಲಿಯ ಪೊಲೀಸ್ ಸಂಕೀರ್ಣದ ತಮ್ಮ ಬ್ಯಾರಕ್‌ಗೆ ಮರಳಿದ ಕೂಡಲೇ ಶೂಟ್ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಇಂದು ಬೆಳಗ್ಗೆ 7.30 ರ ಸುಮಾರಿಗೆ ಈ ಘಟನೆ ನಡೆದಿದೆ ಮತ್ತು ಎಎಸ್ಐ ಅನ್ನು ತಕ್ಷಣವೇ ಉಪ-ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಎಎಸ್ ಐ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು" ಎಂದು ಭದೆರ್ವಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ ಸಿಂಗ್ ಗೌರಿಯಾ ಹೇಳಿದ್ದಾರೆ.

ಈ ಸಂಬಂಧ ಭದೆರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.