ದೇಶ

ಜಮ್ಮು-ಕಾಶ್ಮೀರಕ್ಕೆ ಇನ್ನು 5 ಅಧಿಕೃತ ಭಾಷೆ: ಕೇಂದ್ರ ಸಚಿವ ಸಂಪುಟ ಸಮ್ಮತಿ

ಹಿಂದಿ, ಉರ್ದು, ಕಾಶ್ಮೀರಿ, ಡೋಗ್ರಿ ಮತ್ತು ಇಂಗ್ಲಿಷ್ ಅನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕೃತ ಭಾಷೆಗಳನ್ನಾಗಿ ಘೋಷಿಸಲಾಗುತ್ತದೆ. ಈ ಸಂಬಂಧ ಸಂಸತ್ತಿನಲ್ಲಿ ಮಸೂದೆ ತರಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಬುಧವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ಇನ್ನು 5 ಅಧಿಕೃತ ಭಾಷೆ: ಕೇಂದ್ರ ಸಚಿವ ಸಂಪುಟ ಸಮ್ಮತಿ
ಸಂಗ್ರಹ ಚಿತ್ರ
Published On :

ನವದೆಹಲಿ: ಹಿಂದಿ, ಉರ್ದು, ಕಾಶ್ಮೀರಿ, ಡೋಗ್ರಿ ಮತ್ತು ಇಂಗ್ಲಿಷ್ ಅನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕೃತ ಭಾಷೆಗಳನ್ನಾಗಿ ಘೋಷಿಸಲಾಗುತ್ತದೆ. ಈ ಸಂಬಂಧ ಸಂಸತ್ತಿನಲ್ಲಿ ಮಸೂದೆ ತರಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಬುಧವಾರ ತಿಳಿಸಿದ್ದಾರೆ.

ಬುಧವಾರ ಇಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಜಾವಡೇಕರ್ ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

ಜಮ್ಮು ಮತ್ತು ಕಾಶ್ಮೀರದ ಅಧಿಕೃತ ಭಾಷಾ ವಿಭಾಗಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಅದರಲ್ಲಿ ಹಿಂದಿ, ಉರ್ದು, ಕಾಶ್ಮೀರಿ, ಡೋಗ್ರಿ ಮತ್ತು ಇಂಗ್ಲಿಷ್ ಎಂಬ ಐದು ಭಾಷೆಗಳಿವೆ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಸರ್ಕಾರ 2019ರ ಆಗಸ್ಟ್ 5ರಂದು ಹಿಂಪಡೆದುಕೊಂಡಿತ್ತು. ನಂತರ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.