ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ಕೊರೋನಾ ಸೋಂಕು, ಹೋಮ್ ಐಸೊಲೋಷನ್ ನಲ್ಲಿ ಚಿಕಿತ್ಸೆ!
ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು. ಅವರನ್ನು ಹೋಮ್ ಐಸಲೇಷನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು. ಅವರನ್ನು ಹೋಮ್ ಐಸಲೇಷನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಸ್ವತಃ ಪ್ರಮೋದ್ ಸಾವಂತ್ ಅವರು ಟ್ವೀಟ್ ಮಾಡಿದ್ದು, 'ನನಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ಆದರೆ ಯಾವುದೇ ರೋಗಲಕ್ಷಣಗಳು ಇಲ್ಲದೇ ಇರುವ ಕಾರಣ ಮನೆಯಲ್ಲಿಯೇ ಇಸೊಲೇಶನ್ ನಲ್ಲಿ ಇರುತ್ತೇನೆ. ಮನೆಯಲ್ಲಿ ಇದ್ದುಕೊಂಡು ಕೆಲಸ ನಿರ್ವಹಿಸುತ್ತೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಅಗತ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.
ಇನ್ನು ಗೋವಾದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 17,418ಕ್ಕೆ ಏರಿಕೆಯಾಗಿದ್ದು, ಈ ಪೈಕಿ 192 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಅಂತೆಯೇ 13,577 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


