ಜಮ್ಮು-ಕಾಶ್ಮೀರದಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ: 4 ಎಲ್ಇಟಿ ಸಹಚರರ ಬಂಧನ, ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ವಶಕ್ಕೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಹಾಗೂ ಬುದ್ಲಾಮ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಸಹಚರರನ್ನು ಬಂಧನಕ್ಕೊಳಪಡಿಸಿದೆ ಎಂದು ಬುಧವಾರ ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಹಾಗೂ ಬುದ್ಲಾಮ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಸಹಚರರನ್ನು ಬಂಧನಕ್ಕೊಳಪಡಿಸಿದೆ ಎಂದು ಬುಧವಾರ ತಿಳಿದುಬಂದಿದೆ.
ಬುದ್ಗಾಂನ ಬೀರ್ವಾಹ್ ಹಾಗೂ ಪತ್ಕೂಟ್ ನಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವ ಕುರಿತು ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭಾರತೀಯ ಸೇನಾಪಡೆ ಹಾಗೂ ಬುದ್ಲಾಂ ಪೊಲೀಸರು ಜಂಟಿಯಾಕಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಕಾರ್ಯಾಚರಣೆ ವೇಳೆ ನಾಲ್ವರು ಎಲ್ಇಟಿ ಸಹಚರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಶಂಕಿತ ಉಗ್ರರಿಂದ ಸೇನಾಪಡೆ 24 ಎಕೆ-47, 5 ಸ್ಫೋಟಕ ವಸ್ತುಗಳು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


