ದೇಶ

ಒಎಸ್ ಡಿಗೆ ಕೊರೋನಾ ಪಾಸಿಟಿವ್, ಸ್ವಯಂ ಕ್ವಾರಂಟೈನ್ ಗೆ ಒಳಗಾದ ಉತ್ತರಾಖಂಡ ಸಿಎಂ

ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ತಮ್ಮ ವಿಶೇಷ ಅಧಿಕಾರಿ(ಒಎಸ್ ಡಿ)ಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ವಯಂ-ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಒಎಸ್ ಡಿಗೆ ಕೊರೋನಾ ಪಾಸಿಟಿವ್, ಸ್ವಯಂ ಕ್ವಾರಂಟೈನ್ ಗೆ ಒಳಗಾದ ಉತ್ತರಾಖಂಡ ಸಿಎಂ
ತ್ರಿವೇಂದ್ರ ಸಿಂಗ್ ರಾವತ್
Published On :

ಡೆಹ್ರಾಡೂನ್: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ತಮ್ಮ ವಿಶೇಷ ಅಧಿಕಾರಿ(ಒಎಸ್ ಡಿ)ಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ವಯಂ-ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಸಿಎಂ ಕ್ವಾರಂಟೈನ್ ಗೆ ಒಳಗಾದ ಪರಿಣಾಮ ಇಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟದ ಸಭೆಯನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಒಎಸ್ ಡಿಗೆ ಕೊರೋನಾ ವೈರಸ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವುದರಿಂದ ಮುಖ್ಯಮಂತ್ರಿಗಳು ಮೂರು ದಿನಗಳವರೆಗೆ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 26 ರಂದು ಮುನ್ನೆಚ್ಚರಿಕೆ ಕ್ರಮವಾಗಿ ರಾವತ್ ಅವರು ಮೂರು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಅವರ ಸಲಹೆಗಾರರೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ನಂತರ ಆಗಸ್ಟ್ 26 ರಂದು ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟದ ಸಭೆಯನ್ನು ಮುಂದೂಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.