ದೇಶ

ದೆಹಲಿ ಗಲಭೆ: ಶಾರ್ಜೀಲ್ ಇಮಾಮ್ ಗೆ 14 ದಿನ ನ್ಯಾಯಾಂಗ ಬಂಧನ

ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರನ್ನು ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಗುರುವಾರ ಆದೇಶ ನೀಡಿದೆ.

ದೆಹಲಿ ಗಲಭೆ: ಶಾರ್ಜೀಲ್ ಇಮಾಮ್ ಗೆ 14 ದಿನ ನ್ಯಾಯಾಂಗ ಬಂಧನ
ಶಾರ್ಜೀಲ್ ಇಮಾಮ್
Published On :

ನವದೆಹಲಿ: ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರನ್ನು ದೆಹಲಿ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಗುರುವಾರ ಆದೇಶ ನೀಡಿದೆ.

ಕಳೆದ ಫೆಬ್ರವರಿಯಲ್ಲಿ ಉತ್ತರ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮಾಮ್ ಅವರನ್ನು ಬಂಧಿಸಲಾಗಿತ್ತು. ಆರೋಪಿಯ  ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು, ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಇಮಾಮ್ ಪರ ವಕೀಲ ಅಹಮ್ಮದ್ ಇಬ್ರಾಹಿಂ ಅವರು ತಿಳಿಸಿದ್ದಾರೆ.


ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹಾಗೂ ದೇಶದ್ರೋಹ ಹೇಳಿಕೆ ಆರೋಪದ ಮೇರೆಗೆ ಆಗಸ್ಟ್ 25 ರಂದು ಬಿಹಾರದ ಜಿಹಾನಬಾದ್ ಜಿಲ್ಲೆಯ ಕಾಕೊ ಬಳಿ ಇಮಾಮ್ ಅವರನ್ನು ಬಂಧಿಸಲಾಗಿತ್ತು. ನಂತರ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.