ಸಂಸತ್ ಅಧಿವೇಶನದ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಬೆಂಬಲ!
ಅಚ್ಚರಿಯ ಬೆಳವಣಗೆಯೊಂದರಲ್ಲಿ ಸಂಸತ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಬೆಂಬಲ ನೀಡಿದೆ.

ಮುಂಬೈ: ಅಚ್ಚರಿಯ ಬೆಳವಣಗೆಯೊಂದರಲ್ಲಿ ಸಂಸತ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಬೆಂಬಲ ನೀಡಿದೆ. ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪವನ್ನು ಕೈಬಿಟ್ಟಿರುವ ವಿಚಾರದಲ್ಲಿ ಶಿವಸೇನೆ ಕೇಂದ್ರ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ.
ಪ್ರಶ್ನೋತ್ತರ ಕಲಾಪವನ್ನು ಕೋವಿಡ್-19 ನಿಂದ ಉಂಟಾಗಿರುವ ತುರ್ತು ಕಾರಣಗಳಿಂದಾಗಿ ಕೈಬಿಡಲಾಗಿದೆ, ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಶಿವಸೇನೆ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ವಿಪಕ್ಷಗಳಿಂದ ಟೀಕೆಗಳು ವ್ಯಕ್ತವಾಗುತ್ತಿರುವಾಗಲೇ ಶಿವಸೇನೆ ಕೇಂದ್ರದ ಬೆಂಬಲಕ್ಕೆ ಧಾವಿಸಿರುವುದು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಮಾತನಾಡಿರುವ ಶಿವಸೇನೆಯ ಸಂಸದ ಸಂಜಯ್ ರೌತ್, ಮುಂಗಾರು ಅಧಿವೇಶನ ನಡೆಯುತ್ತಿದ್ದರೂ ಪ್ರಶ್ನೋತ್ತರ ಕಲಾಪವನ್ನು ಕೈಬಿಡಲಾಗಿದೆ. ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು, ಟೀಕಿಸುವುದು ಸರಿಯಲ್ಲ, ಮಹಾರಾಷ್ಟ್ರದಲ್ಲಿ ಅಧಿವೇಶನ ಕೇವಲ 2 ದಿನಗಳಷ್ಟೇ ನಡೆಯುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


