ದೇಶ

ತ.ನಾಡಿನ ಕದ್ದಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ:7 ಮಂದಿ ಸಾವು, ನಾಲ್ವರಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ದುರಂತ ಮತ್ತೆ ಸಂಭವಿಸಿದೆ. ತಮಿಳು ನಾಡಿನ ಕದ್ದಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಎಂ ಶ್ರೀ ಅಭಿನವ್ ತಿಳಿಸಿದ್ದಾರೆ.

ತ.ನಾಡಿನ ಕದ್ದಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ:7 ಮಂದಿ ಸಾವು, ನಾಲ್ವರಿಗೆ ಗಾಯ
ಸ್ಫೋಟದ ನಂತರದ ದೃಶ್ಯ
Published On :

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ದುರಂತ ಮತ್ತೆ ಸಂಭವಿಸಿದೆ. ತಮಿಳು ನಾಡಿನ ಕದ್ದಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಎಂ ಶ್ರೀ ಅಭಿನವ್ ತಿಳಿಸಿದ್ದಾರೆ.

ರಾಜಧಾನಿ ಚೆನ್ನೈಯಿಂದ 190 ಕಿಲೋ ಮೀಟರ್ ದೂರದಲ್ಲಿ ಕದ್ದಲೂರು ಜಿಲ್ಲೆಯ ಕಟ್ಟುಮನ್ನರ್ಕೊಯ್ಲ್ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು ಸ್ಫೋಟಕ್ಕೆ ಕಾರಣವೇನು ಎಂಬುದನ್ನು ತನಿಖಾ ತಂಡ ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಸಿಗಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.