ದೇಶ

ಅನ್ಲಾಕ್ 4 ಎಫೆಕ್ಟ್?: ಮಹಾರಾಷ್ಟ್ರದಲ್ಲಿ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿ

ಲಾಕ್‌ಡೌನ್ ನಿರ್ಬಂಧಗಳು ಸಡಿಲಗೊಂಡಂತೆ ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಅನ್ಲಾಕ್ 4 ಎಫೆಕ್ಟ್?: ಮಹಾರಾಷ್ಟ್ರದಲ್ಲಿ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿ
ಸಾಂದರ್ಭಿಕ ಚಿತ್ರ
Published On :

ಮುಂಬೈ: ಲಾಕ್‌ಡೌನ್ ನಿರ್ಬಂಧಗಳು ಸಡಿಲಗೊಂಡಂತೆ ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 20 ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಮಹಾರಾಷ್ಟ್ರದಲ್ಲಿ ಇಂದು, 20,489 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಮಹಾಮಾರಿಗೆ 312 ಮಂದಿ ಬಲಿಯಾಗಿದ್ದಾರೆ. 10,801 ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ ಆಗಿದ್ದಾರ. 

ಮುಂಬೈನಲ್ಲಿ 1,737 ಹೊಸ ಪ್ರಕರಣಗಳು ಮತ್ತು 33 ಸಾವುನೋವುಗಳು ವರದಿಯಾಗಿದ್ದು, ಇದರೊಂದಿಗೆ ವಾಣಿಜ್ಯ ನಗರಿಯ ಸೋಂಕಿತರ ಸಂಖ್ಯೆ 1,53,712 ಮತ್ತು ಸಾವಿನ ಸಂಖ್ಯೆ 7,832ಕ್ಕೆ ತಲುಪಿದೆ.

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಅತಿ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು, ದೇಶದಲ್ಲಿ ಕೊವಿಡ್-19-19 ಪ್ರಕರಣಗಳ ಸಂಖ್ಯೆ 40 ಲಕ್ಷ ಗಡಿ ದಾಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.