ಕೊರೋನ ಬಿಕ್ಕಟ್ಟು, ವಿದೇಶಿ ವಿದ್ಯಾರ್ಥಿಗಳ ಹಿತ ರಕ್ಷಣೆಗೆ ಸರ್ಕಾರ ಬದ್ಧ: ವಿದೇಶಾಂಗ ಸಚಿವ ಎಸ್ ಜೈಶಂಕರ್
ಕೋವಿಡ್ -19 ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿದೇಶಿ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಿಸಬೇಕೆಂದು ಜಾಗತಿಕ ಸಮುದಾಯಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಮನವಿ ಮಾಡಿದ್ದಾರೆ.

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿದೇಶಿ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಿಸಬೇಕೆಂದು ಜಾಗತಿಕ ಸಮುದಾಯಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಮನವಿ ಮಾಡಿದ್ದಾರೆ.
ಜಿ- 20 ವಿದೇಶಾಂಗ ಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಅವರು ಮಾತನಾಡಿದರು.ಅದೆ ರೀತಿ ನಾಗರಿಕರನ್ನು ಅವರ ತಾಯಿನಾಡಿಗೆ ಕಳುಹಿಸಲು ಸಹ ಕ್ರಮ ಕೈಗೊಳ್ಳಬೇಕು ಎಂದರು. ಈ ಸಭೆಯನ್ನು ಸೌದಿ ಅರೇಬಿಯಾ ಏರ್ಪಡಿಸಿದೆ. ಸೌದಿ ಅರೇಬಿಯಾ ಸಾಮ್ರಾಜ್ಯದ ವಿದೇಶಾಂಗ ವ್ಯವಹಾರಗಳ ಸಚಿವ ರಾಜಕುಮಾರ ಫೈಸಲ್ ಬಿನ್ ಫರ್ಹಾನ್ ಅಲ್-ಸೌದ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕೋವಿಡ್ -19 ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವಾಸ್ತವ ಸಭೆಯನ್ನು ಕರೆಯಲಾಯಿತು.ಕೋವಿಡ್ -19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಗಡಿಯುದ್ದಕ್ಕೂ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಬಗ್ಗೆ ಚರ್ಚೆಗಳು ಕೇಂದ್ರೀಕೃತವಾಗಿದ್ದು ಗಡಿಯಾಚೆಗಿನ ನಿರ್ವಹಣಾ ಕ್ರಮಗಳಿಂದ ಕಲಿತ ಅನುಭವಗಳು ಮತ್ತು ಪಾಠಗಳನ್ನು ಸಚಿವರು ವಿನಿಮಯ ಮಾಡಿಕೊಂಡರು. ವಂದೇ ಭಾರತ್ ಮಿಷನ್ ಸೇರಿದಂತೆ ಭಾರತ ವಿದೇಶಿ ನಾಗರಿಕರ ರಕ್ಷಣೆಗೆ ಕೈಗೊಂಡ ಕ್ರಮಗಳನ್ನು ಜಿ 20 ವಿದೇಶಾಂಗ ಸಚಿವರ ಸಭೆಗೆ ಶಂಕರ್ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


