ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ:ಟ್ರಕ್ ಗೆ ಬಸ್ ಡಿಕ್ಕಿ, 7 ಮಂದಿ ದುರ್ಮರಣ, 7 ಮಂದಿಗೆ ಗಾಯ
ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ.

ರಾಯ್ಪುರ(ಛತ್ತೀಸ್ ಗಢ): ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟು, ಏಳು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ.
ಒಡಿಶಾದ ಗಂಜಮ್ ನಿಂದ ಗುಜರಾತ್ ನ ಸೂರತ್ ಗೆ ಬಸ್ ಪ್ರಯಾಣಿಸುತ್ತಿತ್ತು. ಇಂದು ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದೆ ಎಂದು ರಾಯ್ಪುರದ ಎಸ್ ಎಸ್ ಪಿ ಅಜಯ್ ಯಾದವ್ ತಿಳಿಸಿದ್ದಾರೆ.
ಪರಿಹಾರ ಘೋಷಣೆ:ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ ತೊಂದರೆಗೀಡಾದವರ ಕುಟುಂಬಗಳ ನೆರವಿಗೆ ತಕ್ಷಣ ಧಾವಿಸುವಂತೆ ಸಿಎಂ ನವೀನ್ ಪಟ್ನಾಯಕ್ ಸಚಿವ ಸುಶಾಂತ್ ಸಿಂಗ್ ಅವರಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


