ನವ ದೆಹಲಿ: ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ಜನತೆ ಆತಂಕಪಡಬೇಕಾದ ಅಗತ್ಯವಿಲ್ಲ- ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಆಮ್ ಆದ್ಮಿ ಸರ್ಕಾರ ಕೋವಿಡ್-19 ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಕೊರೋನಾ ವೈರಸ್ ಪ್ರಕರಣಗಳು ಕಂಡುಬಂದಿವೆ ಎಂದು ಕೇಜ್ರಿವಾಲ್ ಆನ್ ಲೈನ್ ಮಾಧ್ಯಮದಲ್ಲಿ ವಿವರಿಸಿದ್ದಾರೆ.
ಜನರು ನಿರ್ಲಕ್ಷ್ಯ ತೋರದೆ ಕೋವಿಡ್-19 ವಿರುದ್ಧದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಕೈಗೊಂಡ ಅನೇಕ ಕ್ರಮಗಳಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಸಾವಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ.
ಕೋವಿಡ್-19 ರೋಗಿಗಳಿಗೆ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯಿಲ್ಲ, 14 ಸಾವಿರ ಹಾಸಿಗೆಗಳ ಪೈಕಿಯಲ್ಲಿ 5 ಸಾವಿರ ಹಾಸಿಗೆಗಳನ್ನು ಮಾತ್ರ ಪಡೆಯಲಾಗಿದೆ. ಈ ಪೈಕಿ 1600 ರಿಂದ 1700 ಹಾಸಿಗೆಗಳನ್ನು ಇತರ ರಾಜ್ಯಗಳಿಗೆ ಸೇರಿದ ರೋಗಿಗಳಿಗೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ 69 ದಿನಗಳಲ್ಲಿ ಅತಿ ಹೆಚ್ಚು ಎನ್ನಬಹುದಾದ ದಾಖಲೆಯ 2,914 ಹೊಸ ಪ್ರಕರಣಗಳು ಕಂಡುಬಂದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


