ಡ್ರಗ್ಸ್ ಮಾಫಿಯಾ: ಬಂಧನ ಭೀತಿಯಲ್ಲಿ ಬಾಲಿವುಡ್ ನಟಿ ರಿಯಾ
ಮಾದಕ ದ್ರವ್ಯ ಬಳಕೆ ಆರೋಪದ ಮೇಲೆ ನಟಿ ರಾಗಿಣಿ ದ್ವಿವೇದಿ ಬಂಧನದ ಬೆನ್ನಲ್ಲೇ ಇದೀಗ ಬಾಲಿವುಡ್ ನ ಟಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿಗೂ ಬಂಧನದ ಭೀತಿ ಶುರುವಾಗಿದೆ.

ಮುಂಬೈ: ಮಾದಕ ದ್ರವ್ಯ ಬಳಕೆ ಆರೋಪದ ಮೇಲೆ ನಟಿ ರಾಗಿಣಿ ದ್ವಿವೇದಿ ಬಂಧನದ ಬೆನ್ನಲ್ಲೇ ಇದೀಗ ಬಾಲಿವುಡ್ ನ ಟಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿಗೂ ಬಂಧನದ ಭೀತಿ ಶುರುವಾಗಿದೆ.
ಬಾಲಿವುಡ್ ನಲ್ಲಿ ಭಾರೀ ಸಂಚಲನ ಮೂಡಿಸಿರುವ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಯಸಿ ರಿಯಾ ಚಕ್ರವರ್ತಿಯ ಸಹೋದರ ಶೋವಿಕ್ ಚಕ್ರವರ್ತಿ ಹಾಗೂ ಸುಶಾಂತ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡಾನನ್ನು ಎನ್'ಸಿಬಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ.
ಮಾದಕ ವಸ್ತು ನಿಯಂತ್ರಣ ದಳ (ಎನ್'ಸಿಬಿ) ಶುಕ್ರವಾರ ಬಂಧಿಸಿದೆ. ಪ್ರಕರಣದ ಜೊತೆ ಥಳುಕು ಹಾಕಿಕೊಂಡಿರುವ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬಂಧಿತ ಡ್ರಗ್ ಡೀಲರ್ ಅಬ್ದೆಲ್ ಬಸಿಲ್ ಪರಿಹಾರ್ ನಿಂದ ಮಾದಕ ದ್ರವ್ಯಗಳನ್ನು ಖರೀದಿಸಿದ್ದಾಗಿ ಶೋವಿಕ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆಂದು ಹೇಳಲಾಗುತ್ತಿದೆ. ಅಲ್ಲದೆ. ತಾನು ಸಹೋದರಿ ರಿಯಾಗಾಗಿ ಡ್ರಗ್ಸ್ ಖರೀಸಿದಿದ್ದ ಸಂಗತಿಯನ್ನೂ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆಂದು ಮೂಲಗಳಿಂದ ತಿಳಿದುಬಂದಿದೆ.
ಹೀಗಾಗಿ ಪ್ರಕರಣಕ್ಕೆ ಸಂಬಂಧಿದಂತೆ ರಿಯಾ ಚಕ್ರವರ್ತಿಯನ್ನು ಎನ್'ಸಿಬಿ ವಶಕ್ಕೆ ಪಡೆದು ಇಲ್ಲವೇ ಬಂಧಿಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಎನ್'ಸಿಬಿ ತಂಡ ಶುಕ್ರವಾರ ಮುಂಜಾನೆ ಶೋವಿಕ್ ಹಾಗೂ ಮಿರಾಂಡಾ ಮನೆ ಮೇಲೆ ದಾಳಿ ನಡೆಸಿ ಇಬ್ಬರನ್ನೂ ದಿನವಿಡೀ ವಿಚಾರಣೆಗೊಳಪಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


