ಚೀನಾ ಸೇನೆಯಿಂದ ಐವರು ಯುವಕರ ಅಪಹರಣ: ಪಿಎಲ್ ಎಗೆ ಭಾರತೀಯ ಸೇನೆಯಿಂದಹಾಟ್ ಲೈನ್ ಸಂದೇಶ
ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ನಿರಿ ಜಿಲ್ಲೆಯಿಂದ ಐವರು ಯುವಕರನ್ನು ಚೀನಾ ಸೇನೆ ಅಪಹರಿಸಿದ ವರದಿಗಳಿಗೆ ಸಂಬಂಧಿಸಿದಂತೆ ಭಾರತೀ ಸೇನೆ ಈಗಾಗಲೇ ಚೀನಾದ ಪೀಪಲ್ಸ್ ಲಿಬರೇಷನ್ ಆಫ್ ಆರ್ಮಿ(ಪಿಎಲ್ ಎ)ಗೆ ಹಾಟ್ ಲೈನ್ ಸಂದೇಶ ಕಳುಹಿಸಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಭಾನುವಾರ ತಿಳಿಸಿದ್ದಾರೆ.

ಇಟಾನಗರ: ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ನಿರಿ ಜಿಲ್ಲೆಯಿಂದ ಐವರು ಯುವಕರನ್ನು ಚೀನಾ ಸೇನೆ ಅಪಹರಿಸಿದ ವರದಿಗಳಿಗೆ ಸಂಬಂಧಿಸಿದಂತೆ ಭಾರತೀ ಸೇನೆ ಈಗಾಗಲೇ ಚೀನಾದ ಪೀಪಲ್ಸ್ ಲಿಬರೇಷನ್ ಆಫ್ ಆರ್ಮಿ(ಪಿಎಲ್ ಎ)ಗೆ ಹಾಟ್ ಲೈನ್ ಸಂದೇಶ ಕಳುಹಿಸಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಭಾನುವಾರ ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದ ಗಡಿಯಲ್ಲಿ ಸ್ಥಾಪಿಸಲಾಗಿರುವ ಪಿಎಲ್ ಕೇಂದ್ರಕ್ಕೆ ಅಪಹರಣ ಕುರಿತು ಭಾರತೀಯ ಸೇನೆ ಈಗಾಗಲೇ ಹಾಟ್ ಲೈನ್ ಸಂದೇಶವನ್ನು ಕಳುಹಿಸಿದೆ. ಆ ಕಡೆಯಿಂದ ಪ್ರತಿಕ್ರಿಯೆ ನಿರೀಕ್ಷಿಸಲಾಗುತ್ತಿದೆ ಎಂದು ಎಂದು ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ರಿಜಿಜು ಅವರು ಹೇಳಿದ್ದಾರೆ.
ವರದಿಗಳ ಪ್ರಕಾರ, ಬೇಟೆಯಾಡಲು ಹೋಗಿದ್ದ ಐವರು ಯುವಕರನ್ನು ನಾಚೊ ಬಳಿಯ ಕಾಡಿನಿಂದ ಅಪಹರಿಸಲಾಗಿದೆ.
ಚೀನಾದ ಪಿಎಲ್ ಎ ಸೈನಿಕರು ನಾಚೊ ವೃತ್ತದಿಂದ ತನ್ನ ಸಹೋದರ ಮತ್ತು ಇತರ ನಾಲ್ವರನ್ನು ಅಪಹರಿಸಲಾಗಿದೆ ಎಂದು ಅಪಹೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


