ಕಾಂಗ್ರೆಸ್ ಸಂಸದ ದೀಪೆಂದರ್ ಹೂಡಾಗೆ ಕೊರೋನಾ ಪಾಸಿಟಿವ್
ಹರಿಯಾಣ ಕಾಂಗ್ರೆಸ್ ಸಂಸದ ದೀಪೆಂದರ್ ಹೂಡಾ ಅವರಿಗೆ ಭಾನುವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಹರಿಯಾಣದಲ್ಲಿ ಕೊರೋನಾ ಸೋಂಕಿತ ಸಂಸದರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಚಂಡೀಗಢ: ಹರಿಯಾಣ ಕಾಂಗ್ರೆಸ್ ಸಂಸದ ದೀಪೆಂದರ್ ಹೂಡಾ ಅವರಿಗೆ ಭಾನುವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಹರಿಯಾಣದಲ್ಲಿ ಕೊರೋನಾ ಸೋಂಕಿತ ಸಂಸದರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
42 ವರ್ಷದ ದೀಪೆಂದರ್ ಅವರು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಪುತ್ರರಾಗಿದ್ದು, ಅವರು ರಾಜ್ಯದ ಏಕೈಕ ವಿರೋಧ ಪಕ್ಷದ ಸಂಸದರಾಗಿದ್ದಾರೆ ಮತ್ತು ಪ್ರಸ್ತುತ ದೆಹಲಿಯಲ್ಲಿದ್ದಾರೆ.
ನನಗೆ ಕೊವಿಡ್ -19 ಪಾಸಿಟಿವ್ ಬಂದಿದ್ದು, ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆಗೆ ಒಳಪಡುವಂತೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದು, ಇತರ ಟೆಸ್ಟ್ ಗಳನ್ನು ನಡೆಸಲಾಯಿತು. ನಿಮ್ಮೆಲ್ಲರ ಪ್ರಾರ್ಥನೆಯೊಂದಿಗೆ ನಾನು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


