ಕೇಂದ್ರ ಸಚಿವ ಹರ್ಷವರ್ಧನ್ ತಾಯಿ ನಿಧನ, ಏಮ್ಸ್ ಗೆ ಕಣ್ಣು ದಾನ
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ತಾಯಿ ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದು, ಅವರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ತಾಯಿ ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದು, ಅವರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.
89 ವರ್ಷದ ನನ್ನ ಇಂದು ಬೆಳಗ್ಗೆ ನಿಧನರಾಗಿದ್ದು, ತಾಯಿಯ ಆಶಯದ ಪ್ರಕಾರ, ಅವರ ಕಣ್ಣುಗಳನ್ನು ಏಮ್ಸ್ ಆಸ್ಪತ್ರೆಯಲ್ಲಿ ದಾನ ಮಾಡಲಾಗಿದೆ ಎಂದು ವರ್ಷವರ್ಧನ್ ಅವರು ಟ್ವೀಟ್ ಮಾಡಿದ್ದಾರೆ.
ತಾಯಿಯ ಶವವನ್ನು ಮಧ್ಯಾಹ್ನ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
'ಅವರ ದೇಹ ದಾನವು ಸಮಾಜಕ್ಕಾಗಿ ಬದುಕಲು ನಮಗೆ ಸ್ಫೂರ್ತಿ ನೀಡುತ್ತದೆ "ಎಂದು ಸಚಿವರು ಹಿಂದಿಯಲ್ಲಿ ಮಾಡಿದ ಟ್ವೀಟ್ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


