ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಬರೋಬ್ಬರಿ ದಾಖಲೆಯ 90,633 ಕೇಸ್ ಪತ್ತೆ, 41 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಭಾನುವಾರ ಸಾರ್ವಕಾಲಿಕ ದಾಖಲೆಯ 90,633 ಸೋಂಕಿತರು ಪತ್ತೆಯಾಗಿದ್ದಾರೆ. ಇದು ಈ ವರೆಗಿನ ದೈನಂದಿನ ಗರಿಷ್ಟವಾಗಿದ್ದು, ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ನವದೆಹಲಿ: ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಭಾನುವಾರ ಸಾರ್ವಕಾಲಿಕ ದಾಖಲೆಯ 90,633 ಸೋಂಕಿತರು ಪತ್ತೆಯಾಗಿದ್ದಾರೆ. ಇದು ಈ ವರೆಗಿನ ದೈನಂದಿನ ಗರಿಷ್ಟವಾಗಿದ್ದು, ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ಒಂದೇ ದಿನ 90,633 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 41 ಲಕ್ಷ ಗಡಿ ದಾಟಿದ್ದು, ಪ್ರಸ್ತುತ ದೇಶದಲ್ಲಿ ಸೋಂಕಿತರ ಸಂಖ್ಯೆ 41,13,812ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 1,065 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 70,626ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮತ್ತೊಂದೆಗೆ 41,13,812 ಮಂದಿ ಸೋಂಕಿತರ ಪೈಕಿ 31,80,866 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,62,320 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಈ ವರೆಗಿನ ದಾಖಲೆಯ 20800 ಮಂದಿಗೆ ಕೊರೋನಾ ಕಾಣಿಸಿಕೊಂಡಿದೆ. ಜೊತೆಗೆ 312 ಮಂದಿ ಜನರು ಬಲಿಯಾಗಿದ್ದಾರೆ. ಉಳಿದಂತೆ ಆಂಧ್ರಪ್ರದೇಶದಲ್ಲಿ 10,825 (71 ಸಾವು), ಕರ್ನಾಟಕದಲ್ಲಿ 9746 (128 ಸಾವು), ತಮಿಳುನಾೃಡು 5870 (64 ಸಾವು), ಉತ್ತರಪ್ರದೇಶ 6590 (81 ಸಾವು) ಹಾಗೂ ಪಶ್ಚಿಮ ಬಂಗಾಳದಲ್ಲಿ 3042 ಮಂದಿಗೆ ಸೋಂಕು ಹಾಗೂ 58 ಮಂದಿ ಬಲಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


