ಶಿಕ್ಷಣ ನೀತಿ-2020ರ ಯಶಸ್ವಿ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು:ರಾಷ್ಟ್ರಪತಿ ಕೋವಿಂದ್
ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಯಶಸ್ವಿ ಜಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಿಣಾಮಕಾರಿ ಕೊಡುಗೆಯನ್ನು ಅವಲಂಬಿಸಿದೆ. ಭಾರತದ ಸಂವಿಧಾನದೊಳಗೆ ಶಿಕ್ಷಣ ಒಂದು ಪ್ರಬಲವಾದ ಅಸ್ತ್ರವಾಗಿದೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಒಟ್ಟಾಗಿ ಇವುಗಳನ್ನು ಯಶಸ್ವಿಯಾಗಿ ಜಾರಿಗೆ ತರಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಯಶಸ್ವಿ ಜಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಿಣಾಮಕಾರಿ ಕೊಡುಗೆಯನ್ನು ಅವಲಂಬಿಸಿದೆ. ಭಾರತದ ಸಂವಿಧಾನದೊಳಗೆ ಶಿಕ್ಷಣ ಒಂದು ಪ್ರಬಲವಾದ ಅಸ್ತ್ರವಾಗಿದೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಒಟ್ಟಾಗಿ ಇವುಗಳನ್ನು ಯಶಸ್ವಿಯಾಗಿ ಜಾರಿಗೆ ತರಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.
ಅವರು ಇಂದು ವರ್ಚುವಲ್ ಕಾನ್ಫರೆನ್ಸ್ ಮೂಲಕ ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಉದ್ದೇಶಿಸಿ ಮಾತನಾಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ರಾಷ್ಟ್ರೀಯ ಸಂಶೋಧನಾ ಫೌಂಡೇಶನ್ ನ್ನು ಸ್ಥಾಪಿಸಲಾಗುವುದು. ಸಂಶೋಧನೆಯ ಸಂಸ್ಕೃತಿಯನ್ನು ಹೆಚ್ಚಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ರಾಷ್ಟ್ರೀಯ ಸಂಶೋಧನಾ ಕೇಂದ್ರದ ಮೂಲಕ ಕೆಲಸ ಮಾಡಬೇಕು ಎಂದರು.
ನೂತನ ಶಿಕ್ಷಣ ನೀತಿಯಲ್ಲಿ ಭಾರತದ ಭಾಷೆಗಳು, ಕಲೆ, ಸಂಸ್ಕೃತಿಗೆ ಆದ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಭಾರತದ ಭಾಷೆಗಳು ಸಮಗ್ರತೆ ಮತ್ತು ಐಕ್ಯತೆಯನ್ನು ಬಲಪಡಿಸುತ್ತದೆ. ತಂತ್ರಜ್ಞಾನಗಳ ಸಮಗ್ರತೆಯನ್ನು ಬಳಸುವ ಮೂಲಕ ಕಲಿಕೆಯ ಪ್ರಕ್ರಿಯೆ ಉತ್ತಮವಾಗಿ ವಿದ್ಯಾರ್ಥಿಗಳ ಭವಿಷ್ಯ ಪ್ರಜ್ವಲವಾಗುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ತಂತ್ರಜ್ಞಾನ ವೇದಿಕೆಯನ್ನು ಸ್ಥಾಪಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


