ಕಂಗನಾ ರನೌತ್ ಗೆ 'ವೈ'ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ
ನಟಿ ಕಂಗನಾ ರನೌತ್‌ಗೆ 'ವೈ ಶ್ರೇಣಿಯ ಭದ್ರತೆಯನ್ನು ಕೇಂದ್ರ ಅನುಮೋದಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.

ನವದೆಹಲ್ಲಿ: ನಟಿ ಕಂಗನಾ ರನೌತ್‌ಗೆ 'ವೈ ಶ್ರೇಣಿಯ ಭದ್ರತೆಯನ್ನು ಕೇಂದ್ರ ಅನುಮೋದಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್‌ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರುಗೆ ವೈ ಶ್ರೇಣಿಯ ಭದ್ರತೆ ನಿಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಮುಖ್ಯಮಂತ್ರಿ ಇದನ್ನು ಬಹಿರಂಗಪಡಿಸಿದ್ದಾರೆ.
"ಕಂಗನಾ ಅವರು ಹಿಮಾಚಲ ಪ್ರದೇಶದ ಮಗಳಾಗಿದ್ದು ಪ್ರಸಿದ್ಧ ವ್ಯಕ್ತಿಯಾಗಿರುವುದರಿಂದ ಅವರಿಗೆ ಭದ್ರತೆಯನ್ನು ಒದಗಿಸುವುದು ನಮ್ಮ ಕರ್ತವ್ಯ" ಎಂದು ಹಿಮಾಚಲ ಪ್ರದೇಶ ಸಿಎಂ ಹೇಳಿದರು.
ಈ ನಡುವೆ ಮುಂಬೈ ಮತ್ತು ಮಹಾರಾಷ್ಟ್ರದ ವಿರುದ್ಧ ಮಾಡಿದ ಟೀಕೆಗಳಿಗೆ ನಟಿ ಕ್ಷಮೆಯಾಚಿಸಬೇಕು ಎಂದು ಭಾನುವಾರ ಶಿವಸೇನೆ ಸಂಸದ ಸಂಜಯ್ ರೌತ್ ಒತ್ತಾಯಿಸಿದ್ದರು.
ಕಂಗನಾ ಇತ್ತೀಚೆಗೆ ಟ್ವೀಟ್ ನಲ್ಲಿ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದರು "ಮುಂಬೈ ಪಾಕಿಸ್ತಾನ ಆಕ್ರಮಿತ-ಕಾಶ್ಮೀರದಂತೆ ಏಕೆ ಬದಲಾಗಿದೆ?" ಕಂಗನಾ ಇತ್ತೀಚೆಗೆ ಟ್ವೀಟ್ ನಲ್ಲಿ ಕೇಳಿದ್ದು, ಸೆಪ್ಟೆಂಬರ್ 1ರ ವರದಿಯೊಂದನ್ನು ಟ್ಯಾಗ್ ಮಾಡಿ, ಅಲ್ಲಿ ನಗರ ಪೊಲೀಸರಿಂದ ಭಯವಿದ್ದು ನಾನು ಮುಂಬೈಗೆ ಮರಳುವುದಿಲ್ಲ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


