ಶೇ.78ರ ಸಮೀಪಕ್ಕೆ ಕೊರೋನಾ ಗುಣಮುಖರ ಪ್ರಮಾಣ
ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಗುಣಮುಖ ಪ್ರಮಾಣ ಈಗ ಶೇ.8ರ ಸಮೀಪಕ್ಕೆ ಬಂದಿದೆ.

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಗುಣಮುಖ ಪ್ರಮಾಣ ಈಗ ಶೇ.8ರ ಸಮೀಪಕ್ಕೆ ಬಂದಿದೆ.
ಒಂದೇ ದಿನ 69,564 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸೆ.7ರವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 32.5 ಲಕ್ಷಕ್ಕೆ ಏರಿಕೆಯಾಗಿ ಗುಣಮುಖ ಪ್ರಮಾಣ ಶೇ.77.31ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದೇ ವೇಳೆ, ಭಾನುವಾರ ಬೆಳಗ್ಗೆ 8ರಿಂದ ಸೋಮವಾರ ಬೆಳಗ್ಗೆ 8ರವರೆಗೆ 24 ಗಂಟೆಗಳಲ್ಲಿ ಬರೋಬ್ಬರಿ ದಾಖಲೆಯ 90,802 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಅವಧಿಯಲ್ಲಿ 1,016 ಸೋಂಕಿತರು ಅಸುನೀಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


