ದೇಶ

ಚಂದಾ ಕೊಚ್ಚರ್  ಪತಿ, ಉದ್ಯಮಿ ದೀಪಕ್ ಕೊಚ್ಚರ್ ಬಂಧನ

ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ಉದ್ಯಮಿ ದೀಪಕ್ ಕೊಚ್ಚರ್ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಚಂದಾ ಕೊಚ್ಚರ್  ಪತಿ, ಉದ್ಯಮಿ ದೀಪಕ್ ಕೊಚ್ಚರ್ ಬಂಧನ
ಚಂದಾ ಕೊಚ್ಚರ್ ಹಾಗೂ ಪತಿ
Published On :

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ಉದ್ಯಮಿ ದೀಪಕ್ ಕೊಚ್ಚರ್ ಅವರನ್ನು ಅಕ್ರಮ ಹಣ ವರ್ಗಾವಣೆ  ಆರೋಪದ ಮೇರೆಗೆ  ಇಡಿ ಅಧಿಕಾರಿಗಳು  ಬಂಧಿಸಿದ್ದಾರೆ.

ವಿಡಿಯೋಕಾನ್ ಇಂಡಸ್ಟ್ರೀಸ್ ಜೊತೆಗಿನ ವ್ಯವಹಾರದ ಬಗ್ಗೆ ತನಿಖೆ ನಡೆಸಿದ ನಂತರ ಜಾರಿ ನಿರ್ದೇಶನಾಲಯ ದೀಪಕ್ ಕೊಚ್ಚರ್ ಅವರನ್ನು ಬಂಧಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಚಂದಾ ಕೊಚ್ಚರ್ ಅವರನ್ನು ಕಸ್ಟಡಿ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ನಾಳೆ ಸೆಷನ್ಸ್ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುವುದು  ಎಂದು ಇಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಕ್ರಿಮಿನಲ್ ಪಿತೂರಿ ಮತ್ತು ವಂಚನೆ ಪ್ರಕರಣವನ್ನು ದಾಖಲಿಸಿದ್ದು, ಚಂದಾ ಕೊಚ್ಚರ್ ನೇತೃತ್ವದ ಐಸಿಐಸಿಐ ಬ್ಯಾಂಕ್, ವಿಡಿಯೋಕಾನ್ ಇಂಡಸ್ಟ್ರೀಸ್ ಗೆ  ಸಾಲ ನೀತಿ ನಿಯಮ  ಉಲ್ಲಂಘಿಸಲಾಗಿದೆ  ಹೆಚ್ಚು ಸಾಲ ಮಂಜೂರು ಮಾಡಲಾಗಿದೆ  ಎಂದೂ  ಆರೋಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.