ಕಂಗನಾಗೆ ವೈ-ಪ್ಲಸ್ ಭದ್ರತೆ ನೀಡುವ ನಿರ್ಧಾರ ಖಂಡಿಸಿದ ಮಹಾ ವಿಕಾಸ್ ಅಘಾಡಿ ನಾಯಕರು
ವಿವಾದಾತ್ಮಕ ಹೇಳಿಕೆಗಳಿಂದ ಸದ್ದು ಮಾಡುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ವೈ-ಪ್ಲಸ್ ಭದ್ರತೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಹಾ ವಿಕಾಸ್ ಅಘಾಡಿ ನಾಯಕರು ಸೋಮವಾರ ಖಂಡಿಸಿದ್ದಾರೆ.

ಮುಂಬೈ: ವಿವಾದಾತ್ಮಕ ಹೇಳಿಕೆಗಳಿಂದ ಸದ್ದು ಮಾಡುತ್ತಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ವೈ-ಪ್ಲಸ್ ಭದ್ರತೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಹಾ ವಿಕಾಸ್ ಅಘಾಡಿ ನಾಯಕರು ಸೋಮವಾರ ಖಂಡಿಸಿದ್ದಾರೆ.
ಮುಂಬೈ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಎಂದು ಕರೆಯುವ ಮೂಲಕ ಕಂಗನಾ ರನೌತ್ ಮರಾಠಿ ಜನರನ್ನು ಅವಮಾನಿಸಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶುಮುಖ್ ಹೇಳಿದ್ದಾರೆ.
ಮಹಾರಾಷ್ಟ್ರವನ್ನು ಅವಮಾನಿಸಿದ ಕಂಗನಾ ರನೌತ್‌ಗೆ ಕೇಂದ್ರ ಸರ್ಕಾರ ವೈ ಭದ್ರತೆಯನ್ನು ಒದಗಿಸಿರುವುದು ಬಹಳ ಆಶ್ಚರ್ಯಕರವಾಗಿದೆ. ಮುಂಬೈ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ, ಅದು ಎಲ್ಲರಿಗೂ ಸೇರಿದೆ. ವಿವಾದಾತ್ಮಕ ನಟಿಗೆ ವೈ-ಪ್ಲಸ್ ಭದ್ರತೆ ನೀಡುವ ಮೂಲಕ ಕೇಂದ್ರವು ತಪ್ಪು ಸಂದೇಶವನ್ನು ನೀಡಿದೆ ”ಎಂದು ದೇಶಮುಖ್ ಹೇಳಿದ್ದಾರೆ.
ವೈ ಭದ್ರತೆ ನೀಡುವುದು ಬಿಜೆಪಿಯ ಆಜ್ಞೆಯ ಮೇರೆಗೆ ನಟಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಸಾಬೀತು ಮಾಡಿದೆ ಎಂದು ಕಾಂಗ್ರೆಸ್ ಸಚಿವ ವಿಜಯ್ ವಾಡೆಟ್ಟಿವಾರ್ ಹೇಳಿದ್ದಾರೆ.
“ಅವರು ಬಿಜೆಪಿಯಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡರೆ ನಾವು ಆಶ್ಚರ್ಯಪಡಬೇಕಾಗಿಲ್ಲ. ನಟಿ ಬಿಜೆಪಿಯ ಕೈಗೊಂಬೆ. ಮಹಾರಾಷ್ಟ್ರ ಮತ್ತು ಮುಂಬೈ ಪೊಲೀಸರನ್ನು ಅವಮಾನಿಸಿದ್ದಕ್ಕಾಗಿ ಬಿಜೆಪಿ ಭದ್ರತೆಯನ್ನು ನೀಡಿದೆ ”ಎಂದು ವಾಡೆಟ್ಟಿವಾರ್ ಆರೋಪಿಸಿದ್ದಾರೆ.
ಇನ್ನು ಕಂಗನಾ ರನೌತ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂಬ ತನ್ನ ಹಿಂದಿನ ಬೇಡಿಕೆಯನ್ನು ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಪುನರುಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


