ದೇಶ

ಲಡಾಖ್ ಬಿಕ್ಕಟ್ಟು: ಸಮಸ್ಯೆ ಪರಿಹಾರಕ್ಕೆ ರಷ್ಯಾದಲ್ಲಿ ಭಾರತ-ಚೀನಾ ವಿದೇಶ ಸಚಿವರ ಮಾತುಕತೆಗೆ ಮುಹೂರ್ತ ಫಿಕ್ಸ್

ಪೂರ್ವ ಲಡಾಖ್ ಗಡಿಯಲ್ಲಿ ಭಾರತ ಹಾಗೂ ಚೀನಾ ನಡುವೆ ಸೃಷ್ಟಿಯಾಗಿರುವ ಸಂಘರ್ಷಕ್ಕೆ ಶೀಘ್ರದಲ್ಲಿಯೇ ಪರಿಹಾರ ದೊರಕುವ ಸಾಧ್ಯತೆಗಳು ಕಂಡು ಬರುತ್ತಿವೆ.

ಲಡಾಖ್ ಬಿಕ್ಕಟ್ಟು: ಸಮಸ್ಯೆ ಪರಿಹಾರಕ್ಕೆ ರಷ್ಯಾದಲ್ಲಿ ಭಾರತ-ಚೀನಾ ವಿದೇಶ ಸಚಿವರ ಮಾತುಕತೆಗೆ ಮುಹೂರ್ತ ಫಿಕ್ಸ್
ಜೈಶಂಕರ್
Published On :

ನವದೆಹಲಿ: ಪೂರ್ವ ಲಡಾಖ್ ಗಡಿಯಲ್ಲಿ ಭಾರತ ಹಾಗೂ ಚೀನಾ ನಡುವೆ ಸೃಷ್ಟಿಯಾಗಿರುವ ಸಂಘರ್ಷಕ್ಕೆ ಶೀಘ್ರದಲ್ಲಿಯೇ ಪರಿಹಾರ ದೊರಕುವ ಸಾಧ್ಯತೆಗಳು ಕಂಡು ಬರುತ್ತಿವೆ. 

ಸೆಪ್ಟೆಂಬರ್ 9-10 ರಂದು ಮಾಸ್ಕೋದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ) ಸಭೆಯಲ್ಲಿ ವಿದೇಶಾಂಗ ಸಚಿವ ಎಂ. ಜೈಶಂಕರ್ ಭಾಗವಹಿಸಲಿದ್ದಾರೆಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ಸಭೆ ಬಳಿಕ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಹಾಗೂ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು, ಉಭಯ ರಾಷ್ಟ್ರಗಳ ಗಡಿ ಸಮಸ್ಯೆ ಕುರಿತು ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಉಭಯ ರಾಷ್ಟ್ರಗಳ ವಿದೇಶಾಂಗ ಸಚಿವರು ಮಾತುಕತೆ ನಡೆಸುವುದು ಖಚಿತಗೊಂಡಿರುವ ಹಿನ್ನೆಲೆಯಲ್ಲಿ ಮಾತುಕತೆ ವೇಳೆ ವಿವಾದಿತ ಪ್ರದೇಶಗಳಿಂದ ಸೇನಾ ಹಿಂತೆಗೆತ ಕುರಿತುನಿರ್ಧಾರ ಕೈಗೊಳ್ಳುವ ನಿರೀಕ್ಷೆಗಳು ಇದೀಗ ಗರಿಗೆದರಿದೆ. 

ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಚೀನಾದ ರಕ್ಷಣಾ ಸಚಿವ ವೆ.ಫೆಂಗೆ ಅವರ ನಡುವೆ ಕಳೆದ ಶುಕ್ರವಾರ ಮುಖಾಮುಖಿ ಮಾತುಕತೆ ನಡೆದಿತ್ತಾದರೂ, ಬಿಕ್ಕಟ್ಟಿಗೆ ಮಂಗಳವಾಡುವಂತಹ ಫಲಪ್ರದ ಬೆಳವಣಿಗೆ ನಡೆದಿರಲಿಲ್ಲ. 

ಗಡಿಯಲ್ಲಿ ಕಳೆದ ಮೇ ತಿಂಗಳಿನಿಂದ ಸಂಘರ್ಷ ನಡೆಯುತ್ತಲೇ ಇದೆ. ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಉಭಯ ದೇಶಗಳ ಯೋಧರು ಘರ್ಷಣೆಗೆ ಬಲಿಯಾಗಿದ್ದಾರೆ. ಹಲವು ಸುತ್ತಿನ ಮಾತುಕತೆ ನಡೆದರೂ ಬಿಕ್ಕಟ್ಟು ಇತ್ಯರ್ಥವಾಗಿಲ್ಲ. ಈ ನಡುವೆ, ಆ29-30ರಂದು ಚೀನಾ ಪಡೆಗಳು ಮತ್ತೆ ಭಾರತದತ್ತ ನುಗ್ಗಲು ಯತ್ನಿಸಿದಾಗ ಭಾರತೀಯ ಸೇನೆ ಹಿಮ್ಮೆಟ್ಟಿಸಿದ ಬೆಳವಣಿಗೆ ಬಳಿಕೆ ಗಡಿಯಲ್ಲಿ ಯುದ್ಧ ಸದೃಶ ವಾತಾವರಣ ನಿರ್ಮಾಣವಾಗಿದೆ. 

ಈ ನಡುವೆ ಲಡಾಖ್ ಸಂಘರ್ಷ ಹಾಗೂ ದಕ್ಷಇಣ ಚೀನಾ ಸಮುದ್ರ ವಿಚಾರವನ್ನು ಇಟ್ಟುಕೊಂಡು ಚೀನಾದಲ್ಲಿ ರಾಷ್ಟ್ರೀಯ ಭಾವ ಉದ್ದೀಪನಗೊಳಿಸಲು ಕಮ್ಯುನಿಸ್ಟ್ ಪಕ್ಷದ ಸರ್ಕಾರ ಪ್ರಯತ್ನಿಸಿತ್ತು. ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಚೀನಾ ನಿಲುವು ಬದಲಾಗಿದೆ ಎಂದೂ ಹೇಳಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.