ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ
ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ.

ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ.
ದಿನವೊಂದಕ್ಕೆ 24 ಮಾಧ್ಯಮ ಪ್ರತಿನಿಧಿಗಳು ಮಾತ್ರ ಲೋಕಸಭೆ, 15 ಪ್ರತಿನಿಧಿಗಳು ರಾಜ್ಯಸಭೆಗಳ ಕಲಾಪಗಳನ್ನು ವರದಿ ಮಾಡಬಹುದಾಗಿದೆ.
ಈ 39 ಮಾಧ್ಯಮ ಪ್ರತಿನಿಧಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಸಂಸತ್ ಭವನ ಪ್ರವೇಶಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ. ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಪರೀಕ್ಷೆ ನಡೆಸುವುದಕ್ಕೆ ಕಾರ್ಯದರ್ಶಿಗಳು ಇನ್ನೂ ಯಾವುದೇ ನಿರ್ಧಾರವನ್ನೂ ಕೈಗೊಂಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


