ದೇಶ

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 75,809 ಕೇಸ್ ಪತ್ತೆ, 42.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 72,775 ಮಂದಿ ಬಲಿ

ಮಂಗಳವಾರ ದೇಶದಾದ್ಯಂತ 75,809 ಹೊಸ ಕೊರೋನಾ ಕೇಸು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 75,809 ಕೇಸ್ ಪತ್ತೆ, 42.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 72,775 ಮಂದಿ ಬಲಿ
ಸಂಗ್ರಹ ಚಿತ್ರ
Published On :

ನವದೆಹಲಿ: ಮಂಗಳವಾರ ದೇಶದಾದ್ಯಂತ 75,809 ಹೊಸ ಕೊರೋನಾ ಕೇಸು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 1,133 ಜನರು ಸಾವನ್ನಪ್ಪಿದ್ದು, ಈ ವರೆಗೆ ಬಲಿಯಾದವರ ಸಂಖ್ಯೆ 72,775ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು 42,80,423 ಮಂದಿ ಸೋಂಕಿತರ ಪೈಕಿ 33,23,951 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,83,697 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇನ್ನು ನಿನ್ನೆ ಮಹಾರಾಷ್ಟ್ರದಲ್ಲಿ ಮತ್ತೆ 16,429 ಮಂದಿಗೆ ಸೋಂಕು ತಗುಲಿದ್ದು, ಕೊರೋನಾ ಸೋಂಕಿಗೆ 423 ಮಂದಿ ಬಲಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.