ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 89,706 ಪ್ರಕರಣ, 43 ಲಕ್ಷ ದಾಟಿದ ಸೋಂಕಿತರ ಸಂಖ್ಯೆ, 73,890 ಮಂದಿ ಬಲಿ
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 89,706 ಹೊಸ ಕೊರೋನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 43,70,129ಕ್ಕೆ ಏರಿಕೆಯಾಗಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 89,706 ಹೊಸ ಕೊರೋನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 43,70,129ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,115 ಜನರು ಮೃತಪಟ್ಟಿದ್ದು, ಈವರೆಗೆ ಬಲಿಯಾದವರ ಸಂಖ್ಯೆ 73,890ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು 43,70,129 ಮಂದಿ ಸೋಂಕಿತರ ಪೈಕಿ 33,98,845 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,97,394 ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆಯವರೆಗೆ ದೇಶದಲ್ಲಿ ಒಟ್ಟು 5 ಕೋಟಿಯ 18 ಲಕ್ಷದ 04 ಸಾವಿರದ 677 ಮಂದಿಯ ಕೊರೋನಾ ಪರೀಕ್ಷೆ ಮಾಡಲಾಗಿದ್ದು ಇವರಲ್ಲಿ 11 ಲಕ್ಷದ 54 ಸಾವಿರದ 549 ಕೊರೋನಾ ಪರೀಕ್ಷೆಯ ಮಾದರಿಗಳನ್ನು ನಿನ್ನೆ ಒಂದೇ ದಿನ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


