ರಾಷ್ಟ್ರಪತಿ ಭವನದ ಕರ್ತವ್ಯದಲ್ಲಿದ್ದ ಯೋಧ ಆತ್ಮಹತ್ಯೆ
40 ರ ಹರೆಯದ ಸೈನಿಕನೋರ್ವ ಬುಧವಾರ ಬೆಳಿಗ್ಗೆ ರಾಷ್ಟ್ರಪತಿ ಭವನದ ಗೂರ್ಖಾ ರೈಫಲ್ಸ್‌ನ ಬ್ಯಾರಕ್ ಒಂದರಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನವದೆಹಲಿ: 40 ರ ಹರೆಯದ ಸೈನಿಕನೋರ್ವ ಬುಧವಾರ ಬೆಳಿಗ್ಗೆ ರಾಷ್ಟ್ರಪತಿ ಭವನದ ಗೂರ್ಖಾ ರೈಫಲ್ಸ್‌ನ ಬ್ಯಾರಕ್ ಒಂದರಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನನ್ನು ನೇಪಾಳದ ತಿಖಾಯನ್ ನಿವಾಸಿ ತೇಕ್ ಬಹದ್ದೂರ್ ಥಾಪಾ ಎಂದು ಗುರುತಿಸಲಾಗಿದೆ
ಬೆಳಿಗ್ಗೆ 4 ಗಂಟೆ ಸುಮಾರಿಗೆ ಸೌತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಈ ಘಟನೆ ವರದಿಯಾಗಿದೆ. ಗೂರ್ಖಾ ರೈಫಲ್ಸ್‌ನ ಬ್ಯಾರಕ್‌ನಲ್ಲಿ ಸೈನಿಕ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ನವದೆಹಲಿ) ದೀಪಕ್ ಯಾದವ್ ತಿಳಿಸಿದ್ದಾರೆ.
ಅಪರಾಧ ಪರಿಶೀಲನೆ ತಂಡ ಸ್ಥಳಕ್ಕೆ ಭೇಟಿ ನೀಡಿ ತನಿಖಾಮಗಳನ್ನು ಪ್ರಾರಂಭಿಸಿದೆ. ಮುಂಜಾನೆ 3: 30 ರ ಸುಮಾರಿಗೆ ತೇಕ್ ಬಹದ್ದೂರ್ ನೇಣು ಬಿಗಿದುಕೊಂಡಿದ್ದನ್ನು ಸಹೋದ್ಯೋಗಿಯೊಬ್ಬರು ನೋಡಿ ಉಳಿದ ತಮ್ಮ ಸಹೋದ್ಯೋಗಿಗಳಿಗೆ ಎಚ್ಚರಿಸಿದ್ದಾರೆ. ತಕ್ಷಣ ಅವನನ್ನು ದೆಹಲಿ ಕಂಟೋನ್ಮೆಂಟ್‌ನ ಬೇಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಅಲ್ಲಿನ ವೈದ್ಯರು ಆತ ಮೃತಪಟ್ಟಿದ್ದಾಗಿ ಘೋಷಿಸಿದ್ದರು.
ಪ್ರಾಥಮಿಕ ವಿಚಾರಣೆಯಲ್ಲಿ ಸೈನಿಕ ತೀವ್ರವಾದ ಬೆನ್ನುನೋವು ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ ಎಂದು ಪೋಲೀಸ್ ಅಧಿಕಾರಿ ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


