ಕುಪ್ವಾರ: ಜೈಶ್ ಇ ಮಹಮದ್ ನ ಇಬ್ಬರು ಉಗ್ರರ ಬಂಧಿಸಿದ ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಜೈಶ್ ಇ ಮಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಜೈಶ್ ಇ ಮಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದೆ.
ಈ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದ್ದು, ಕುಪ್ವಾರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜೈಶ್ ಇ ಮಹಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ.
ಅಂತೆಯೇ ಬಂಧಿತ ಉಗ್ರರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು 7 ಲಕ್ಷ ರೂ ಮೌಲ್ಯದ ನಗದು ವಶಪಡಿಸಿಕೊಳ್ಳಲಾಗಿದೆ. ಸೇನಾ ಮೂಲಗಳು ತಿಳಿಸಿರುವಂತೆ ಬಂಧಿತರಾದ ಉಗ್ರರಿಂದ ಒಂದು ಎಕೆ47 ರೈಫಲ್, ಎರಡು ಗ್ರೆನೇಡ್, 30 ಕಾಡುತೂಸುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


