ಲಕ್ಷಣಗಳಿದ್ದು, ಪರೀಕ್ಷೆ ವೇಳೆ ನೆಗೆಟಿವ್ ಬಂದಿರುವವರನ್ನು ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ಕೊರೋನಾ ಸೋಂಕು ಲಕ್ಷಣಗಳಿದ್ದೂ ಕೂಡ ಆರ್-ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿರುವವರನ್ನು ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ ಎಂದು ಕೇಂದ್ರ ಸರ್ಕಾರ ರಾಜ್ಯಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ನವದೆಹಲಿ: ಕೊರೋನಾ ಸೋಂಕು ಲಕ್ಷಣಗಳಿದ್ದೂ ಕೂಡ ಆರ್-ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿರುವವರನ್ನು ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ ಎಂದು ಕೇಂದ್ರ ಸರ್ಕಾರ ರಾಜ್ಯಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಗುರುವಾರ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದ್ದು, ಕೊರೋನಾ ಸೋಂಕು ಲಕ್ಷಣಗಳಿದ್ದೂ ಕೂಡ ಆರ್-ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿರುವವರನ್ನು ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ. ಯಾವುದೇ ಕಾರಣಕ್ಕೂ ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆಯದೇ ಸಮಾಜದಲ್ಲಿ ತಿರುಗುವಂತಿಲ್ಲ. ಆತನಿಂದ ಇತರರಿಗೆ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸುವುದು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕರ್ತವ್ಯವಾಗಿದೆ. ಸೋಂಕು ತಡೆಯುವ ಈ ಕಾರ್ಯದಲ್ಲಿ ಯಾರನ್ನೂ ಕೂಡ ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿದೆ.
ಐಸಿಎಂಆರ್ ಮಾರ್ಗದರ್ಶನದಂತೆ ಕೆಲವು ದೊಡ್ಡ ರಾಜ್ಯಗಳಲ್ಲಿ, ರಾಪಿಡ್ ಆಂಟಿಜೆನ್ ಟೆಸ್ಟ್ (ರಾಟ್) ಪರೀಕ್ಷೆ ನಡೆಯುತ್ತಿಲ್ಲ. ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮತ್ತು ಆರ್-ಟಿಪಿಸಿಆರ್ ಪರೀಕ್ಷೆಗಳಲ್ಲಿ ನೆಗೆಟಿವ್ ಬಂದ ಎರಡು ಮೂರು ದಿನಗಳಲ್ಲಿ ರೋಗಲಕ್ಷಣಗಳು ಗೋಚರಿಸುತ್ತಿವೆ. ಹೀಗಾಗಿ ರೋಗ ಲಕ್ಷಣಗಳು ಇರುವವರು ಕೂಡ ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಬೇಕು ಎಂದೂ ಆರೋಗ್ಯ ಇಲಾಖೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


