ದೇಶ

ಬಿಕನೆರ್-ಜೈಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸೇನಾಧಿಕಾರಿಗಳ ಸಾವು

ಬಿಕನೆರ್-ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸೇನಾಧಿಕಾರಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಬಿಕನೆರ್-ಜೈಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸೇನಾಧಿಕಾರಿಗಳ ಸಾವು
ಅಪಘಾತ ಸಂಭವಿಸಿದ ಸ್ಥಳ
Published On :

ಬಿಕನೆರ್: ಬಿಕನೆರ್-ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸೇನಾಧಿಕಾರಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. 

ಅಪಘಾತದಲ್ಲಿ ಮೃತಪಟ್ಟ ಸೇನಾಧಿಕಾರಿಗಳನ್ನು ಕರ್ನಲ್ ಮನೀಶ್ ಸಿಂಗ್ ಚೌಹಾಣ್ ಹಾಗೂ ಮೇಜರ್ ನೀರಜ್ ಶರ್ಮಾ ಎಂದು ಗುರ್ತಿಸಲಾಗಿದೆ. 

ಬಿಕನೆರ್-ಜೈಪುರ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ವಾಹನದಲ್ಲಿ ಕರ್ನಲ್ ಮನೀಶ್ ಸಿಂಗ್ ಚೌಹಾಣ್ ಹಾಗೂ ಮೇಜರ್ ನೀರಜ್ ಹಾಗೂ ಇತರೆ ಸೇನಾ ಸಿಬ್ಬಂದಿಗಳು ವಾಹನದಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ವಾಹನದ ಟೈಯರ್ ಸ್ಫೋಟಗೊಂಡಿವೆ. ಪರಿಣಾಮ ಅಪಘಾತ ಸಂಭವಿಸಿ ಇಬ್ಬರು ಸೇನಾಧಿಕಾರಿಗಳು ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ರಾಜಸ್ಥಾನ ರಾಜ್ಯದ ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ. 

ಘಟನೆಯಲ್ಲಿ ವಾಹನದಲ್ಲಿದ್ದ ಕೆಲ ಸೇನಾ ಸಿಬ್ಬಂದಿಗಳೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಅಧಿಕಾರಿಗಳು ಇದೀಗ ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.