ಕೋವಿಡ್-19: 24 ಗಂಟೆಗಳಲ್ಲಿ ಗರಿಷ್ಠ 81,533 ಸೋಂಕಿತರು ಗುಣಮುಖ, 5 ರಾಜ್ಯಗಳ ಪಾಲೇ ಶೇ.60
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ.

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ.
ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 81,533 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 36 ಲಕ್ಷ ಗಡಿ ದಾಟಿದೆ. ಈ ವರೆಗೂ ದೇಶದಲ್ಲಿ 36,24,196 ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ದೇಶದಲ್ಲಿನ ಕೊರೋನಾ ಗುಣಮುಖರ ಪ್ರಮಾಣ 77.77ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಕಂಡುಬಂದ 81,533 ಗುಣಮುಖರ ಪೈಕಿ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಮತ್ತು ಉತ್ತರ ಪ್ರದೇಶ ಈ ಐದು ರಾಜ್ಯಗಳಲ್ಲಿಯೇ ಶೇ.60ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 14 ಸಾವಿರ ಸೋಂಕಿತರು ಗುಣಮುಖರಾಗಿದ್ದು, ಕರ್ನಾಟಕದಲ್ಲಿ 12 ಸಾವಿರ ಮಂದಿ ಗುಣಮುಖರಾಗಿದ್ದಾರೆ.
ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,201 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಕೋವಿಡ್-19 ಸಾವಿನ ಸಂಖ್ಯೆ 77,472ಕ್ಕೆ ಏರಿಕೆಯಾಗಿದೆ. ಕೋವಿಡ್ ಸಾವಿನ ಪ್ರಮಾಣ 1.66ಕ್ಕೆ ಕುಸಿದಿದ್ದು, ಗುಣಮುಖರ ಪ್ರಮಾಣ ಶೇ.77.77ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


