ದೇಶ

ಬಾರಾಮುಲ್ಲಾದಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ: ಓರ್ವ ಉಗ್ರ, ಇಬ್ಬರು ಉಗ್ರರ ಸಹಚರರ ಬಂಧನ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಉಗ್ರ ಹಾಗೂ ಇಬ್ಬರು ಉಗ್ರರ ಸಹಚರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಬಾರಾಮುಲ್ಲಾದಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ: ಓರ್ವ ಉಗ್ರ, ಇಬ್ಬರು ಉಗ್ರರ ಸಹಚರರ ಬಂಧನ
ಸಂಗ್ರಹ ಚಿತ್ರ
Published On :

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಉಗ್ರ ಹಾಗೂ ಇಬ್ಬರು ಉಗ್ರರ ಸಹಚರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

ಬಾರಾಮುಲ್ಲಾದ ದಂಗಾರ್ಪುರ ಎಂಬ ಪ್ರದೇಶದಲ್ಲಿ ಉಗ್ರರ ಚಟುವಟಿಕೆಗಳು ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಶುಕ್ರವಾರ ಸಂಜೆ ಕಾರ್ಯಾಚರಣೆಗಿಳಿದಿತ್ತು. ಇದರಂತೆ ಇಂದು ಓರ್ವ ಉಗ್ರ ಹಾಗೂ ಇಬ್ಬರು ಸಹಚರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಕಾರ್ಯಾಚರಣೆ ವೇಳೆ ಉಗ್ರನಿಂದ 1 ಚೀನಾ ಮೂಲದ ಪಿಸ್ತೂಲ್ ಹಾಗೂ ನಿಯತಕಾಲಿಕೆ, 12 ಸುತ್ತಿನ 9 ಎಂಎಂ ಪಿಸ್ತೂಲು, 1 ಚೀನಾ ಮೂಲದ ಗ್ರೆನೇಡ್ ಹಾಗೂ ಇನ್ನಿತರೆ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ನಿನ್ನೆ ಕೂಡ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಬಂಧನಕ್ಕೊಳಪಡಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.