ವಿರೋಧದ ನಡುವೆಯೂ ಕೋವಿಡ್ ಮುಂಜಾಗ್ರತೆಗಳೊಂದಿಗೆ ಇಂದು ದೇಶದಾದ್ಯಂತ ನೀಟ್ ಪರೀಕ್ಷೆ ಆರಂಭ
ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಾದ ನೀಟ್ ಭಾನುವಾರ ಆರಂಭವಾಗಲಿದ್ದು, ಸುಮಾರು 15.97ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಾದ ನೀಟ್ ಭಾನುವಾರ ಆರಂಭವಾಗಲಿದ್ದು, ಸುಮಾರು 15.97ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಅತ್ಯಂದ ಬಿಗಿ ಭದ್ರತೆಯ ಜೊತೆಜೊತೆಗೇ ಹಲವು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 2,546ರಿಂದ 3,843ಕ್ಕೆ ಏರಿಕೆ ಮಾಡಲಾಗಿದೆ. ಒಂದು ಕೋಣೆಯಲ್ಲಿ 24ರ ಬದಲಾಗಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಕೊಠಿ ಹೊರಗೆ ದೈಹಿಕ ಅಂತರ ಪಾಲಿಸಲು ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಮಾಸ್ಕ್ ಕಡ್ಡಾಯ ಸೇರಿದಂತೆ ಹಲವು ಸುರಕ್ಷತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಈ ಮೊದಲು ಮೇ.3ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಎರಡು ಬಾರಿ ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


